ಜನ ಸ್ಪಂದನ ಕಾರ್ಯಕ್ರಮದಿಂದ ಮಕ್ಕಳಿಗೆ ಬಿಸಿಯೂಟ
ಶಿವಮೊಗ್ಗ
ಲಷ್ಕರ್ ಮೊಹಲ್ಲಾದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯು ಒಂದು ವರ್ಷದ ಹಿಂದೆ ಸೋಮಿನಕೊಪ್ಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದ್ದು ಅಲ್ಲಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ವ್ಯವಸ್ಥೆ ಇರುವುದಿಲ್ಲ. ಈ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಜೂ. 28 ರಂದು ನೆಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪೋಷಕರು ಮನವಿ ಮಾಡಿರುತ್ತಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಮೌಲಾನಾ ಆಜಾದ್ ಮಾದರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕಲ್ಪಿಸುವಂತೆ ಸೂಚಿಸಿರುತ್ತಾರೆ. ಅದರಂತೆ ಜೂ.29 ರಿಂದ ಹತ್ತಿರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಿಂದ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
Shivamogga News ಸೋಮಿನಕೊಪ್ಪ ಆಜಾದ್ ಶಾಲೆಯಲ್ಲಿ ಬಿಸಿಯೂಟ ಶುರು. ಜನಸ್ಪಂದನದ ಫಲಶೃತಿ
Date: