Wednesday, September 16, 2026
Wednesday, September 16, 2026

S N Channabasappa ಶಿವಮೊಗ್ಗದಲ್ಲಿ ಡೆಂಗ್ಯು ನಿಯಂತ್ರಣಕ್ರಮ ಕೈಗೊಳ್ಳಿ. ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

Date:

S N Channabasappa ಶಿವಮೊಗ್ಗ ನಗರದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರದ ಕುರಿತಂತೆ ಕ್ರಮವಹಿಸುವಂತೆ ಸೂಚಿಸಿ, ದಿನನಿತ್ಯ ಫಾಗಿಂಗ್ ವ್ಯವಸ್ಥೆ, ಸ್ಪ್ರೇ ಸಿಂಪಡಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಶಾಸಕ ಎಸ್ ಎನ್ ಚನ್ನಬಸಪ್ಪ ಆರೋಗ್ಯ ಅಧಿಕಾರಿಗೆ ಸೂಚಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಶಿವಮೊಗ್ಗ ನಗರದ ಗೋಪಾಳ, ಬೊಮ್ಮನಕಟ್ಟೆ, ಗಾಡಿಕೊಪ್ಪ ಹಾಗೂ ಸೋಮಿನಿಕೊಪ್ಪದ ಹೊರವಲಯ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರುದ್ರಭೂಮಿಗೆ ಪ್ರತ್ಯೇಕ ಜಾಗ ಹಾಗೂ ಮೂಲಸೌಕರ್ಯಕ್ಕಾಗಿ ಕ್ರಮ ವಹಿಸಲು, ಮಹಾನಗರ ಪಾಲಿಕೆಯ ವ್ಯಾಪ್ತಿಯ ರುದ್ರ ಭೂಮಿಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದರು.

S N Channabasappa ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಇರುವ ಅಂಡರ್ ಪಾಸ್ ಅನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಬೇಕು. ನಗರದಲ್ಲಿ ಬೀದಿ ನಾಯಿಗಳಿಂದ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕು. ಗಾಂಧಿಬಜಾರ್‌ನಲ್ಲಿ ಪ್ರತಿ ಮಂಗಳವಾರ ನಡೆಯುವ ಸಂತೆಯನ್ನು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿ ಇರುವ ಸಂತೆ ಮೈದಾನಕ್ಕೆ ಸ್ಥಳಾಂತರಿಸಲು ಆದೇಶಿಸಿದರು.

ಶಿವಮೊಗ್ಗ ನಗರದ ಹೂವಿನ ಮಾರುಕಟ್ಟೆಯನ್ನು ಬಸ್ ಸ್ಟ್ಯಾಂಡ್ ನಿಂದ ಬಿ.ಹೆಚ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಸ್ಥಳಾಂತರಿಸುವುದು,
ಪೌರಕಾರ್ಮಿಕರ ಭವನ ಮತ್ತು ಪೌರಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಉದ್ಘಾಟಿಸಲು, ನಗರದಲ್ಲಿರುವ ಬೀದಿ ದೀಪಗಳ ಸಮಸ್ಯೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ನಗರದ ಹೊರವಲಯದಲ್ಲಿರುವ ತಂಬಾಕು ಗೋಡನನ್ನು ಗೋಶಾಲೆಗೆ ನೀಡುವಂತೆ ಸರ್ಕಾರಗೆ ಪ್ರಸ್ತಾವನೆ ಕಳಿಸಲು ಆದೇಶಿಸಿದರು. ಎಂಆರ್‌ಎಸ್ ಸರ್ಕಲ್ ನಲ್ಲಿ ಯುದ್ಧ ಟ್ಯಾಂಕರ್ ಸ್ಥಾಪಿಸುವ ಕುರಿತಂತೆ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...