Thursday, March 19, 2026
Thursday, March 19, 2026

ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ಲಸಿಕೆ ಕಾರ್ಯಕ್ರಮ

Date:

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಸಂತಾಹರಣ ಶಸ್ತ್ರ ಚಿಕಿತ್ಸೆ ಹಾಗೂ ರೇಬಿಸ್ ಲಿಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಕಿ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲೇ ಬಿಡಲಾಗುವುದು. ಈ ಕಾರ್ಯಕ್ರಮದ ಉದ್ದೇಶವು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ನಾಯಿಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು. ಪ್ರಾಣಿ ಜನ್ಯ ರೋಗಗಳಾದ ರೇಬಿಸ್, ಲೆಪ್ಟೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಮತ್ತು ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳನ್ನು ನಿವಾರಿಸುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಸ್ತ್ರಚಿಕಿತ್ಸೆಯು ರಾಜೀವಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕದಲ್ಲಿ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ 18004257677 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...