Monday, September 21, 2026
Monday, September 21, 2026

BREAKING NEWS ಯುಪಿ ಹತ್ರಾಸ್ ಕಾಲ್ತುಳಿತ ದುರಂತ.120ಕ್ಕೂ ಅಧಿಕ ಸಾವು

Date:

Breaking News ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 120 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
“ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.
ಪುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗದಲ್ಲಿ ಈ ಘಟನೆ ನಡೆದಿದೆ ಎಂದು ಇಟಾಹ್‌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ
Breaking News ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಜನದಟ್ಟಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಸಿಕಂದರ ರಾವ್ ಪೊಲೀಸ್ ಠಾಣೆ ಎಸ್‌ಎಚ್‌ಒ ಆಶಿಶ್ ಕುಮಾರ್ ಅವರು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...