Friday, November 22, 2024
Friday, November 22, 2024

DC Shivamogga ಡೆಂಗ್ಯು ನಿಯಂತ್ರಣದಲ್ಲಿ ಇಲಾಖೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಿ- ಗುರುದತ್ತ ಹೆಗಡೆ

Date:

DC Shivamogga ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಡೆಂಗ್ಯೂ ನಿಯಂತ್ರಣದಲ್ಲಿ ತಮ್ಮ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಡೆಂಗ್ಯು ಜ್ವರ ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿ ಶುಕ್ರವಾರವನ್ನು ಡೆಂಗ್ಯು ಹರಡುವ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯ ದಿನವಾಗಿ ಅನುಷ್ಟಾನಗೊಳಿಸಲು ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ಜು.05 ರ ಶುಕ್ರವಾರದಂದು ಜಿಲ್ಲಾಧಿಕಾರಿಗಳು ನಗರದ ಶೇಷಾದ್ರಿಪುರಂ ಮತ್ತು ಸುತ್ತಮುತ್ತಲ ಪ್ರದೇಶಗಳ ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸಿದರು.

ಪ್ರಸ್ತುತ ಮಳೆಗಾಲವಾಗಿದ್ದು ಡೆಂಗ್ಯು ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಹೆಚ್ಚಿದ್ದು, ನಂತರದ ದಿನಗಳಲ್ಲಿ ರೋಗ ಪ್ರಸರಣ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಿಂದ ಡೆಂಗ್ಯು ಜ್ವರ ನಿಯಂತ್ರಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಮನೆ ಮನೆಗೆ ಆಶಾ, ಅಂಗನವಾಡಿ, ಆರೋಗ್ಯ ಕಾಯಕರ್ತರು ತೆರಳಿ ಲಾರ್ವಾ ಸಮೀಕ್ಷೆ ಹಾಗೂ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಇಲಾಖೆ ಜೊತೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಿದರೆ ನಿಯಂತ್ರಣ ಪರಿಣಾಮಕಾರಿ ಆಗುತ್ತದೆ.

ಆದ್ದರಿಂದ ಸಾರ್ವಜನಿಕರು ತಮ್ಮ ಮನೆಗಳು ಹಾಗೂ ಸಿಬ್ಬಂದಿ ವರ್ಗದವರು ಕಚೇರಿಗಳು, ಶಾಲಾ, ಕಾಲೇಜುಗಳಲ್ಲಿ ನೀರು ತುಂಬುವ ಪರಿಕರಗಳನ್ನು ಸ್ವಚ್ಚವಾಗಿ ತೊಳೆದು ಒಣಗಿಸಿ, ಪುನಃ ಭರ್ತಿ ಮಾಡಬೇಕು. ಅವಶ್ಯವಿರುವ ನೀರಿಗೆ ಮುಚ್ಚಬೇಕು. ಈಡಿಸ್ ಸೊಳ್ಳೆ ಶುದ್ದ ನೀರಿನಲ್ಲೇ ಉತ್ಪತ್ತಿಯಾಗುವ ಕಾರಣ ಈ ಎಲ್ಲ ಕ್ರಮಗಳನ್ನು ವಹಿಸಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಡಿಹೆಚ್‍ಓ ಡಾ.ನಟರಾಜ್ ಮಾತನಾಡಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವ ಮೂಲಕ ಜನರಲ್ಲಿ ಇದೊಂದು ದೈನಂದಿನ ಅಭ್ಯಾಸದಂತಾಗಿ ವರ್ತನೆಯಲ್ಲಿ ಶಾಶ್ವತ ಬದಲಾವಣೆ ತರುವ ಉದ್ದೇಶ ಹೊಂದಲಾಗಿದೆ. ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಸಹಕರಿಸಬೇಕು. ತಮ್ಮ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ತೊಟ್ಟಿ, ಡ್ರಂ ಇತರೆ ಸಂಗ್ರಹ ಪರಿಕರಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಬೇಕು. ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಇತ್ಯಾದಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ವಿಲೇವಾರಿ ಮಾಡಬೇಕು. ಸೊಳ್ಳೆ ನಿರೋಧಕಗಳು ಮತ್ತು ಸೊಳ್ಳೆ ಪರದೆಯನ್ನು ಬಳಸಬೇಕು ಎಂದು ತಿಳಿಸಿದರು.

DC Shivamogga ಇದೇ ವೇಳೆ ಆರೋಗ್ಯ ಇಲಾಖೆ ವೈದ್ಯರು, ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತರು ಮನೆಗಳಿಗೆ ತೆರಳಿ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ, ನಾಶಪಡಿಸಿ, ಅರಿವು ಮೂಡಿಸಿದರು.

ಜಿಲ್ಲಾಧಿಕಾರಿಗಳ ಭೇಟಿ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ, ಆರ್‍ಸಿಹೆಚ್‍ಓ ಡಾ.ನಾಗರಾಜ್ ನಾಯಕ್, ಟಿಹೆಚ್‍ಓ ಡಾ.ಚಂದ್ರಶೇಖರ್, ಡಾ.ಶ್ರೀಧರ್, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...

M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್

M.B.Patil 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ...