Friday, June 19, 2026
Friday, June 19, 2026

CM Siddharamaih ಐಎಎಸ್ ಇತ್ಯಾದಿ ಪರೀಕ್ಷೆಗಳಿಗೆ ಸಿದ್ಧವಾಗುವ ಎಸ್ ಸಿ & ಎಸ್ ಟಿ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆಗೆ ಕ್ರಮ -ಸಿದ್ಧರಾಮಯ್ಯ

Date:

CM Siddharamaih ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ಐ.ಎ.ಎಸ್‌ ಹಾಗೂ ಐ.ಆರ್‌.ಎಸ್‌ ಆಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ದೆಹಲಿಯಲ್ಲಿ ಹಾಸ್ಟೆಲ್‌ ಸ್ಥಾಪನೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಈ ಸಂಬಂಧ ತಕ್ಷಣ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ.

ಈ ಹಾಸ್ಟೆಲ್‌ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ, ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 15 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಸರ್ಕಾರ ನೀಡಲಿದೆ.
ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಸ್ಥಾಪನೆಯಾಗಲಿದ್ದು. ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಒದಗಿಸಲು ನಿರ್ಧರಿಸಲಾಗಿದೆ.

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್‌ ಸಭೆಯಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...