Dr. C. N. Manjunath ರಾಜ್ಯಾದ್ಯಂತ ಡೆಂಗ್ಯೂ ಹರಡುತ್ತಿರುವ ಸಂಬಂಧ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ನಿಯಂತ್ರಣ ಬಹು ಮುಖ್ಯ. ಡೆಂಗ್ಯೂ ಜ್ವರ ನಿಯಂತ್ರಣ ಆಗದೆ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಕಾಯಿಲೆ ಬರುವ ಸಾಧ್ಯತೆಗಳಿವೆ.
ಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಒಂದು ಟಾಸ್ಕ್ ಫೋರ್ಸ್ ರಚಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.
ಮಳೆಗಾಲದ ಸಮಸ್ಯೆಗಳಿಗೆ ಬೇಸಿಗೆ ಕಾಲದಲ್ಲೇ ಪರಿಹಾರ ಕಂಡುಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಒಬ್ಬ ವೈದ್ಯರು ಸೇರಿ 6-7 ಜನರು ಸತ್ತಿದ್ದು, ಸಾವಿರಾರು ಜನ ಸೋಂಕಿತರಿದ್ದಾರೆ. ಮಕ್ಕಳಲ್ಲೂ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲ ಶಾಲೆ- ಕಾಲೇಜುಗಳಿಗೆ ಸುತ್ತೋಲೆ ಕಳಿಸಿ, ಶಾಲಾ ಆಡಳಿತದ ಜೊತೆ ಸಭೆ ನಡೆಸಬೇಕು. ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ. ಹೀಗಾಗಿ ಈ ಬಗ್ಗೆ ಮುಂಜಾಗೃತಾ ಕ್ರಮ ವಹಿಸುವ ಜೊತೆಗೆ ಜನ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
Dr. C. N. Manjunath ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ನಾರಾಯಣ ಕೆ, ಸಹ ಸಂಚಾಲಕ ಡಾ.ಯೋಗಾನಂದ, ರಾಜ್ಯ ವಕ್ತಾರ ಅಶೋಕ್ ಕೆ.ಎಂ. ಗೌಡ ಅವರು ಭಾಗವಹಿಸಿದ್ದರು.