Bhadra Dam ಮಧ್ಯ ಕರ್ನಾಟಕದ ಜೀವನಾಡಿಯಾದ ಭದ್ರಾ ಡ್ಯಾಮ್ ನಿಂದ ಅಪಾರ ಪ್ರಮಾಣದಲ್ಲಿ ನೀರು ನದಿಗೆ ಸೋರಿಕೆಯಾಗುತ್ತಿದ್ದನ್ನು ಸಂಪೂರ್ಣವಾಗಿ ತಡೆಗಟ್ಟಿದ್ದಾರೆ. ಭದ್ರ್ರಾ ಡ್ಯಾಮ್ ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿರಂತರ ಶ್ರಮದಿಂದಾಗಿ ಅಚ್ಚುಕಟ್ಟು ಪ್ರದೇಶದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಐದು ದಿನಗಳಿಂದ ಬದ್ರ ಡ್ಯಾಮ್ ನ ರಿವರ್ ಸ್ಲೀವ್ಸ್ ಗೇಟ್ನಿಂದ ಸುಮಾರು ೨೫೦೦ ರಿಂದ ೩೦೦೦ ಕಿಸೆಕ್ಸ್ ನೀರು ನದಿಗೆ ಪೋಲಾಗುತ್ತಿತ್ತು. ಇದರಿಂದ ಆತಂಕಗೊಂಡ ಅಚ್ಚುಕಟ್ಟು ಪ್ರದೇಶದ ರೈತರು ಎರಡು ದಿನದ ಹಿಂದೆ ಕಾಡಾ ಅಧ್ಯಕ್ಷರ ಸಮ್ಮುಖದಲ್ಲಿ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಕ್ರೋಶ ಮತ್ತು ಆತಂಕವನ್ನು ವ್ಯಕ್ತಪಡಿಸಿದ್ದರು.
ಈ ಬಾರಿ ಕಳೆದ ವರ್ಷಕ್ಕಿಂತಲೂ ಕನಿಷ್ಠ ನೀರು ಸಂಗ್ರಹ ಇದ್ದುದರಿಂದ ರೈತರು ಪ್ರಶ್ನಿಸಿದ್ದರು ಇದಕ್ಕೆ ಉತ್ತರ ನೀಡಲಾಗದೆ ಡ್ಯಾಮ್ ನ ಇಂಜಿನಿಯರ್ ಗಳು ಅಧಿಕಾರಿಗಳು ಮಳೆಗಾಲದಲ್ಲಿ ಗೇಟ್‌ಗಳ ರಿಪೇರಿ ಕಾರ್ಯಕ್ಕೆ ಮುಂದಾಗಿದ್ದರು.
ಸ್ಲೀವ್ಸ್ ಗೇಟ್ ರಿಪೇರಿ ಮಾಡುವಾಗ ಗೇಟ್ ಅನ್ನು ಮೇಲಕ್ಕೆ ಎತ್ತಿದ ಸಂದರ್ಭದಲ್ಲಿ ಮತ್ತೆ ಪುನ: ಅದನ್ನು ಸ್ಥಳಕ್ಕೆ ಸೇರಿಸಲು ಸಾಧ್ಯವಾಗದೆ ಅಧಿಕಾರಿಗಳು ಕೈ ಚೆಲ್ಲಿದ್ದರು.
Bhadra Dam ಹೀಗಾಗಿ ಡ್ಯಾಮಿನ ಹಿಂದಿನಲ್ಲಿ ಸಂಗ್ರಹವಾಗುತ್ತಿದ್ದ ನೀರು ಸಂಪೂರ್ಣವಾಗಿ ಸ್ಲೀವ್ಸ್ ಗೇಟ್ನಿಂದ ನದಿಗೆ ಸೋರಿಕೆಯಾಗುತ್ತಿತ್ತು. ಇದರಿಂದ ಆತಂಕಗೊಂಡಿದ್ದ ಅಧಿಕಾರಿಗಳು ಸ್ಲೀವ್ಸ್ ಗೇಟ್ ರಿಪೇರಿಗೆ ಮುಂದಾದರೂ ಕೂಡ ತಾಂತ್ರಿಕ ತಜ್ಞರ ಸಲಹೆ ಮತ್ತು ಕೊರತೆ ಎದ್ದು ಕಾಣುತ್ತಿತ್ತು ಇದಕ್ಕೆ ಪೂರಕ ಎಂಬಂತೆ ಅಚ್ಚುಕಟ್ಟು ಪ್ರದೇಶದ ರೈತರು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.