Rotary Club Malenadu ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತ ಬಂದಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ ಎಂದು ರೋಟರಿ ಕ್ಲಬ್ ಮಲೆನಾಡು ಅಧ್ಯಕ್ಷ ಸಿ.ರಾಜು ಅಭಿಪ್ರಾಯಪಟ್ಟರು.
ರೋಟರಿ ಕ್ಲಬ್ ಮಲೆನಾಡು ವತಿಯಿಂದ ಗೋಪಾಲಗೌಡ ಬಡಾವಣೆಯಲ್ಲಿ ಆಯೋಜಿಸಿದ್ದ 2ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಹೆಚ್ಚಿನ ಸೇವಾ ಕಾರ್ಯಕ್ರಮಗಳನ್ನು ನಡೆಸಿದ್ದು, ಉತ್ತಮ ಕೆಲಸಗಳನ್ನು ಮಾಡಿದ ಸಾರ್ಥಕ ಭಾವವಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮಕ್ಕಳ ಶಿಕ್ಷಣಕ್ಕೆ ಅನುಕೂಲ ವ್ಯವಸ್ಥೆ ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸಲು ಮಲೆನಾಡು ಕ್ಲಬ್ ಶ್ರಮಿಸಿದೆ. ಆರೋಗ್ಯ ಶಿಬಿರಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ಮೂಡಿಸಿದೆ ಎಂದರು.
ರೋಟರಿ ಮಂಜುಳಾ ರಾಜು ಮಾತನಾಡಿ, ಸಂಸ್ಥಾಪನಾ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದು, ಎಲ್ಲರ ಸಹಕಾರದಿಂದ ಹೆಚ್ಚಿನ ಸೇವೆ ಮಾಡಲು ಸಾಧ್ಯವಾಯಿತು. ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಾಧ್ಯವಾಯಿತು ಎಂದು ತಿಳಿಸಿದರು.
Rotary Club Malenadu ರಾಜು ಅವರ ಅಧ್ಯಕ್ಷ ಅವಧಿಯಲ್ಲಿ ಸಭೆಗಳನ್ನು ನಡೆಸಲು ಉತ್ತಮವಾದ ಹಾಲ್ ನಿರ್ಮಿಸಿಕೊಟ್ಟರು. ಸದಸ್ಯರನ್ನು ಸೇರ್ಪಡೆಗೊಳಿಸಿ ಸಂಸ್ಥೆ ಬಲಪಡಿಸುವಲ್ಲಿ ರಾಜು ಅವರ ಕಾರ್ಯ ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಸಂಸ್ಥೆಯು ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಹೇಳಿದರು.
ಸಂಸ್ಥಾಪನಾ ದಿನಾಚರಣೆ ಅಂಗವಾಗಿ 2 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸರ್ಕಾರಿ ಶಾಲೆಗಳಿಗೆ ಕೊಡುಗೆಯಾಗಿ ನೀಡಲಾಗುತ್ತದೆ. ಶೆಟ್ಟಿಕೆರೆ, ಆಯನೂರು, ವಿರೂಪಿನಕೊಪ್ಪ, ಸೋಮಿನಕೊಪ್ಪ ಹಾಗೂ ಮಲೆನಾಡು ಕ್ಲಬ್‌ಗೆ ಪ್ರೊಜೆಕ್ಟರ್, ಪ್ರಿಂಟರ್, ಟಿವಿ, ಕುಡಿಯುವ ನೀರಿನ ಘಟಕ, ಹೀಗೆ ಅವಶ್ಯವಿರುವ ವಸ್ತುಗಳನ್ನು ನೀಡಲಾಗುತ್ತದೆ ಎಂದರು. ರೋಟರಿ ಕ್ಲಬ್ ಮಲೆನಾಡು ಪದಾಧಿಕಾರಿಗಳು ಉಪಸ್ಥಿತರಿದ್ದರು.
Rotary Club Malenadu ರೋಟರಿ ಸಂಸ್ಥೆಯು ಶಿಕ್ಷಣ & ಆರೋಗ್ಯ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ- ಸಿ.ರಾಜು
Date: