Thursday, September 17, 2026
Thursday, September 17, 2026

Valmiki Development Corporation ವಾಲ್ಮೀಕಿ ನಿಗಮ ಬಹುಕೋಟಿ ಹಗರಣ.ಮಾಜಿ ಸಚಿವ ನಾಗೇಂದ್ರ & ಶಾಸಕ ಬಸನಗೌಡ ದದ್ದಲ್ ನಿವಾಸದ ಮೇಲೆ “ಇಡಿ” ದಾಳಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಬಳ್ಳಾರಿಯ ನೆಹರು ಕಾಲೊನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ. ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ.

Valmiki Development Corporation ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...