Non-resident Indian Committee ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.
ಜು.12ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು, ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವದೆಲ್ಲೆಡೆ ನೆಲೆಸಿರುವ ಅನಿವಾಸಿ ಕನ್ನಡಿಗರ ಆಕಾಂಕ್ಷೆ, ಅವಶ್ಯಕತೆ ಮತ್ತು ನಿರೀಕ್ಷೆಗಳನ್ನು ಗಮನದಲ್ಲಿ ಇಟ್ಟುಕೊಂಡು 2016-17 ನೇ ಸಾಲಿನಲ್ಲಿ ಅನಿವಾಸಿ ಭಾರತೀಯ ನೀತಿಯನ್ನು ಹೊರತರಲಾಗಿದೆ. ಅನಿವಾಸಿ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.
ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ. ಗಲ್ಫ್ ದೇಶಗಳಿಗೆ ತೆರಳಿದ ಅನಿವಾಸಿ ಕನ್ನಡಿಗರಿಂದ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತ ಕರೆಗಳು ಬರುತ್ತಿರುತ್ತವೆ.
ನಕಲಿ ಏಜೆನ್ಸಿ ಮೂಲಕ ತೆರಳಿದ ದುಡಿಯುವ ವರ್ಗ ಅಲ್ಲಿ ತೊಂದರೆಗಳೊಳಗಾಗಿ, ಯಾವುದೋ ಕೆಲಸ ಮಾಡುವುದು ಅನಿವಾರ್ಯವಾಗಿ, ಅವರ ವೀಸಾ ಮತ್ತು ಪಾಸ್‌ಪೋರ್ಟಗಳನ್ನೂ ಉದ್ಯೋಗದಾತರು ಕಿತ್ತುಕೊಂಡು ಪರಿತಪಿಸುತ್ತಾರೆ.
ಹಾಗೂ ಶಿವಮೊಗ್ಗ, ಹೆಚ್‌ಡಿ ಕೋಟೆ ಮತ್ತು ಹುಣಸೂರಿನ ಹಕ್ಕಿಪಿಕ್ಕಿ ಜನಾಂಗದವರು ವಿಶ್ವದೆಲ್ಲೆಡೆ ಸಂಚರಿಸುತ್ತಾರೆ. ಅವರು ಕೆಲಸಕ್ಕೆ ತೆರಳಿದ ಬಗ್ಗೆ ದೇಶದಲ್ಲಿ ಹಲವು ಕಷ್ಟಗಳನ್ನು ಅನುಭವಿಸುತ್ತಾರೆ. ಇತ್ತೀಚೆಗೆ 40ಕ್ಕೂ ಹೆಚ್ಚು ಜನರು ಸೂಡಾನ್‌ನಲ್ಲಿ ಸಿಲುಕಿದ್ದರು.
Non-resident Indian Committee ಭದ್ರಾವತಿ, ತೀರ್ಥಹಳ್ಳಿಯಿಂದಲೂ ಹೆಚ್ಚಿನ ಜನರು ದುಡಿಯುವ ಉದ್ದೇಶಗಳಿಗೆ ಕಾಂಬೋಡಿಯಾ, ವಿಯೆಟ್ನಾಂ ಇತರೆ ಬೇರೆ ದೇಶಗಳಿಗೆ ತೆರಳಿ ಸವಾಲುಗಳನ್ನು ಎದುರಿಸುತ್ತಾರೆ. ವಿದೇಶದಲ್ಲಿ ಮರಣ ಹೊಂದಿದವರ ಶವವನ್ನು ಇಲ್ಲಿಗೆ ತರಲು ಕರೆ ಮಾಡುತ್ತಾರೆ. ಕೋವಿಡ್, ಇತರೆ ಸಂಕಷ್ಟದ ಸಮಯದಲ್ಲಿ ಅನಿವಾಸಿ ಕನ್ನಡಿಗರಿಗೆ ಸಹಾಯ ಮಾಡಲಾಗಿದೆ. ವಿದೇಶದಿಂದ ಹಿಂದುರಿಗದವರಿಗೆ ಇಲ್ಲಿ ಬಂದ ಮೇಲೆ ಅನೇಕ ರೀತಿಯ ಸಮಸ್ಯೆ ಕೂಡ ಎದುರಾಗಿದೆ ಎಂದರು.