Wednesday, December 17, 2025
Wednesday, December 17, 2025

BJP Shivamogga ಎಮ್ಮೆಹಟ್ಟಿಗೆ ಸಂಸದ ರಾಘವೇಂದ್ರ ಸಂಗಡ ಜಿಲ್ಲಾ ಬಿಜೆಪಿ ವರಿಷ್ಠರ ಸಾಂತ್ವನ ಭೇಟಿ. ಕುಟುಂಬಗಳಿಗೆ ಪಕ್ಷದಿಂದ ₹15 ಲಕ್ಷ ಪರಿಹಾರ ಕೊಡುಗೆ

Date:

BJP Shivamogga ಕಳೆದ ಜೂನ್ ತಿಂಗಳಲ್ಲಿ ಶ್ರದ್ಧಾ ಕೇಂದ್ರಗಳಿಗೆ ಪ್ರವಾಸಕ್ಕೆಂದು ಮರಾಠ ಸಮಾಜದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ, ಹನುಮಂತಾಪುರ, ಶಿವಮೊಗ್ಗ ನಗರದಿಂದ ಸುಮಾರು 17ಮಂದಿ ಕುಟುಂಬದವರು ಹೊರಟಿದ್ದರು ದುರಾದೃಷ್ಟವಶಾತ್ ಜೂ.28ರಂದು ಹಾವೇರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 13 ಮಂದಿ ಧಾರುಣವಾಗಿ ಸಾವು ಕಂಡು 4ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಆರ್ಥಿಕ ನೆರವು ಶಿವಮೊಗ್ಗ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಹಾಗು ಡಾ‌.ಧನಂಜಯ್ ಸರ್ಜಿ ಸೇರಿದಂತೆ ಇನ್ನಿತರ ಬಿಜೆಪಿ ನಾಯಕರುಗಳು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿ ಆರ್ಥಿಕ ನೆರವನ್ನು ನೀಡಿದ್ದಾರೆ.

ನೆರವು ನೀಡಿದ ನಂತರ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಸುಮಾರು ಹದಿನೈದು ದಿನಗಳ ಹಿಂದೆ ಜೂ.28ರಂದು ಹಾವೇರಿಯಲ್ಲಿ ನಡೆದ ಅಪಘಾತದಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮ ಹಾಗು ಪಕ್ಕದ ಹನುಮಂತಾಪುರ ಗ್ರಾಮ ಹಾಗು ಶಿವಮೊಗ್ಗ ನಗರದಲ್ಲಿ ವಾಸವಾಗಿದ್ದ ಒಂದೇ ಸಮಾಜದ ಹಿಂದೂಗಳು 13ಮಂದಿ ಧಾರುಣವಾಗಿ ಮೃತ ಪಟ್ಟಿದ್ದರು.

ಇನ್ನೂ ನಾಲ್ಕು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ ಘಟನೆ ನಡೆದ ಸಂಧರ್ಭದಲ್ಲಿ ಪಕ್ಷದ ವತಿಯಿಂದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಗ್ರಾಮಕ್ಕೆ ಬಂದು ಮೃತ ಕುಟುಂಬದ ಸಂಬಂಧಿಗಳಿಗೆ ಸಾಂತ್ವಾನ ಹೇಳಲಾಗಿತ್ತು.

BJP Shivamogga ಮೃತ ಕುಟುಂಬಗಳಿಗೆ ನೆರವಾಗಲು ಸಂಘಟನೆ ತೀರ್ಮಾನಿಸಿದೆ ಅದರಂತೆ ಕುಟುಂದ ಸದಸ್ಯರಿಗೆ ಸಹಾಯವಾಗಲು ಮತ್ತು ಕುಟುಂಬದಲ್ಲಿರುವ ಮಕ್ಕಳಿಗೆ ವಿಧ್ಯಾಭ್ಯಾಸಕ್ಕೆ ನೆರವಾಗಲು ಪಕ್ಷದಿಂದ ಒಟ್ಟು ಹದಿನೈದು ಲಕ್ಷಗಳ ನೆರವು ನೀಡಿದ್ದೇವೆ. ಇದರಲ್ಲಿ ಅಪಘಾತದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ತಲಾ ಒಂದು ಲಕ್ಷ ಹಾಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರವ ಗಾಯಾಳುಗಳಿಗೆ ನೆರವಾಗಲು ನಿರ್ಧರಿಸಿ ಆರ್ಥಿಕ ನೆರವು ನೀಡಲಾಗಿದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...