Bhavasara Vision India Prerana Institute ಪೌರ ಕಾರ್ಮಿಕರು ಸ್ವಚ್ಛತೆಯ ಹರಿಕಾರರು. ಒಂದು ದಿನ ನಗರದಲ್ಲಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸಿದಿದ್ದರೆ ಇಡೀ ನಗರ ಗಾಲೀಜಿನಿಂದ ಕೂಡಿರುತ್ತದೆ ಎಂದು ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್ ಅಭಿಮತ ವ್ಯಕ್ತಪಡಿಸಿದರು.
ಕಾಶೀಪುರದ ಉದ್ಯಾನವನದಲ್ಲಿ ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಶಿವಮೊಗ್ಗ ಸಂಸ್ಥೆ ವತಿಯಿಂದ ಪೌರ ಕಾರ್ಮಿಕರಿಗೆ ಉಡಿ ತುಂಬಿ ಸೀರೆ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪೌರ ಕಾರ್ಮಿಕರಿಂದ ನಗರ ಸ್ವಚ್ಛತೆಯಿಂದ ಕೂಡಿದ್ದು, ಅವರ ಕಾರ್ಯಕ್ಕೆ ನಾವೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಬೇಕು. ಉತ್ತಮ ವಾತಾವರಣ ಸೃಷ್ಟಿಯಾಗಲು ಅವರ ಪಾತ್ರ ಪ್ರಮುಖವಾಗಿ ಸಹಕಾರಿಯಾಗಿದೆ.
ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಮೂಲ್ಯವಾಗಿದ್ದು, ಪೌರ ಕಾರ್ಮಿಕರು ಕೆಲಸದ ವೇಳೆ ಸುರಕ್ಷತಾ ಪರಿಕರಗಳನ್ನು ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
Bhavasara Vision India Prerana Institute ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆ ಅಧ್ಯಕ್ಷೆ ಉಮಾ ವೆಂಕಟೇಶ್ ಮಾತನಾಡಿ, ಪೌರ ಕಾರ್ಮಿಕರು ನಗರದಲ್ಲಿ ಯಾವುದೇ ಸ್ವಚ್ಛತೆ ಕಾರ್ಯದಲ್ಲಿ ಬೇಸರ ಇಲ್ಲದೆ ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಾರೆ. ಅವರ ಆರೋಗ್ಯವೂ ಸಹ ಮುಖ್ಯ. ಬರುವ ದಿನದಲ್ಲಿ ಪೌರ ಕಾರ್ಮಿಕರಿಗೆ ನಮ್ಮ ಸಂಸ್ಥೆ ವತಿಯಿಂದ ಆರೋಗ್ಯ ತಪಾಸಣೆ ಹಮ್ಮಿಕೊಳ್ಳುವುದಾಗಿ ನುಡಿದ ಅವರು, ಎಲ್ಲ ಪೌರ ಕಾರ್ಮಿಕರಿಗೂ ಉಡಿ ತುಂಬಿ, ಫಲಪುಷ್ಪ ನೀಡಿ, ಗೌರವಿಸಿದರು.
ಕಾರ್ಯಕ್ರಮದಲ್ಲಿ ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆಯ ಕಾರ್ಯದರ್ಶಿ ಕವಿತಾ ಹರೀಶ್, ಉಮೆನ್ ವೆಲ್ ಫೇರ್ ಸಂಸ್ಥೆಯ ಸ್ನೇಹಾಪ್ರಶಾಂತ್, ವೀಣಾ, ನಂಜುಂಡ, ಸಹಕಾರ್ಯದರ್ಶಿ ಸುಮಾನವಲೆ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು
