Rain In Uttara Kannada ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಆರು ಜನರನ್ನು ಬಲಿ ತೆಗೆದುಕೊಂಡಿದ್ದ ಗುಡ್ಡ ಕುಸಿತದ ಜಾಗಕ್ಕೆ ರಕ್ಷಣಾ ತಂಡ ತಲುಪಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ಮಳೆ ಸುರಿದಿತ್ತು. ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಸಣ್ಣ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗಿ ರಸ್ತೆಯಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.
Rain In Uttara Kannada ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ , ಜಿಲ್ಲಾ ಪಂಚಾಯತ್ ಸಿಸಿಒ ಈಶ್ವರ್ ಕಾಂದೂ ಹಾಗೂ ಎಸ್‌ಪಿ ಎಂ ನಾರಾಯಣ್ ಅವರು ಲಾರಿಯಲ್ಲಿ ಪ್ರಯಾಣಿಸಿ ಘಟನಾ ಸ್ಥಳವನ್ನು ತಲುಪಿದ್ದಾರೆ. ಶಿರೂರು ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐದು ಜನ ಮಣ್ಣಿನ ಅಡಿಯಲ್ಲಿ ಸಿಲುಕಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಗ್ಯಾಸ್ ಟ್ಯಾಂಕರ್‌ಗಳು, ಮೂರು ಮನೆ ಮತ್ತು ಒಂದು ಕಾರು ಮಣ್ಣಿನೊಂದಿಗೆ ಕೊಚ್ಚಿ ಹೋಗಿ ನದಿ ಪಾಲಾಗಿತ್ತು. ಘೋರ ದುರಂತ ನಡೆದ ಸ್ಥಳಕ್ಕೆ ತೆರಳುತ್ತಿದ್ದ ಅಧಿಕಾರಿಗಳ ವಾಹನಗಳೂ ಕೂಡಾ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಸಂಚರಿಸಲು ಆಗದೆ ನಿಂತಿತ್ತು. ಈ ವೇಳೆ ದುರ್ಘಟನೆ ನಡೆದ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಲಾರಿಯೊಂದರ ಸಹಾಯ ಪಡೆದುಕೊಂಡಿದ್ದಾರೆ.
Rain In Uttara Kannada ಮಳೆ ,ಗುಡ್ಡ ಕುಸಿತ ಸ್ಥಳಕ್ಕೆ ಸಾಗಲು ಕಾರು ಬಿಟ್ಟು ಲಾರಿ ಏರಿದ ಕಾರವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
Date: