Rotary Shivamogga ಸೇವಾಮನೋಭಾವದ ಜೊತೆಯಲ್ಲಿ ಒಬ್ಬ ನಾಯಕನಲ್ಲಿ ಮಾನವತೆ, ಸಹನೆ ಹಾಗೂ ಗುರಿ ಬಹಳ ಪ್ರಮುಖವಾಗಿರುತ್ತದೆ. ಅದನ್ನು ಸಮಯಕ್ಕೆ ಸರಿಯಾಗಿ ನಿಭಾಯಿಸಿ ತಂಡದೊಂದಿಗೆ ಮುಂದೆ ಸಾಗುವುದು ಒಬ್ಬ ನಾಯಕನ ಜವಾಬ್ದಾರಿ ಆಗಿರುತ್ತದೆ ಎಂದು ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ ಸಲಹೆ ನೀಡಿದರು.
ಶಿವಮೊಗ್ಗ ನಗರದ ಪ್ರತಿಷ್ಠಿತ ಸಂಸ್ಥೆಯಾದ ರೋಟರಿ ಶಿವಮೊಗ್ಗ ಸೆಂಟ್ರಲ್ 2024-25 ನೇ ಸಾಲಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಅಧಿಕಾರ ಸ್ವೀಕಾರ ಸಮಾರಂಭವನ್ನು ನಗರದ, ವಿಶಾಲ್ ಮಾರ್ಟ್ ಎದುರು, ರೋಟರಿ ಭವನದಲ್ಲಿ ಅತಿ ವಿಜೃಂಭಣೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನಾಧಿಕಾರಿಯಾಗಿ ಆಗಮಿಸಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿ ಮಾತನಾಡಿದ ಅವರು, ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಒಂದು ಸಂಸ್ಥೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಎಲ್ಲಾ ಸದಸ್ಯರನ್ನು ಒಳಗೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬರುವುದು ಒಬ್ಬ ನಾಯಕನ ಜವಾಬ್ದಾರಿ ಆಗಿರುತ್ತದೆ ಆ ಜವಾಬ್ದಾರಿಯನ್ನು ಈ ವರ್ಷ ಅಧ್ಯಕ್ಷರಾಗಿರುವ ರೋಟರಿನ್ ಕಿರಣ್ ಕುಮಾರ್ ರವರದಾಗಿದೆ ಎಂದರು.
ಈ ವರ್ಷ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಮುಖವಾಗಿ ರಸ್ತೆ ಸುರಕ್ಷತೆ, ಆರೋಗ್ಯ ಸ್ವಚ್ಛತೆ, ಎಜುಕೇಶನ್ ಜಾಗೃತಿ, ಹಸಿರು ಮತ್ತು ನೀರಿನ ಬಗ್ಗೆ ಜಾಗೃತಿ ಬಗ್ಗೆ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಅಧ್ಯಕ್ಷರು ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಇದರ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರಿ ಎಂದು ಸಲಹೆ ನೀಡಿದರು.
ನೂತನವಾಗಿ ಅಧಿಕಾರ ಸ್ವೀಕರಿಸಿದ ರೋಟರಿ ಶಿವಮೊಗ್ಗ ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲ ರೋಟರಿ ಸಂಸ್ಥೆಯರಿಗೂ ಧನ್ಯವಾದಗಳನ್ನು ತಿಳಿಸಿದ ಅವರು, ಈ ವರ್ಷ ನೀಡುವ ಜವಾಬ್ದಾರಿಯನ್ನು ಎಲ್ಲಾ ಮಾದರಿ ಸದಸ್ಯರನ್ನು ಒಳಗೊಂಡು ಜಿಲ್ಲಾ ಪ್ರಾಜೆಕ್ಟ್ ಗಳನ್ನು ಮಾಡುವಲ್ಲಿ ಯಶಸ್ವಿಯಾಗೋಣ ಎಂದರು.
ವಲಯ 11ರ ಅಸಿಸ್ಟೆಂಟ್ ಗವರ್ನರ್ ಸುರೇಶ್.ಹೆಚ್.ಎಂ, ನೂತನ ಅಧ್ಯಕ್ಷರಿಗೂ ಹಾಗೂ ಕಾರ್ಯದರ್ಶಿಗಳಿಗೂ ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿ, ರೋಟರಿ ಜಿಲ್ಲೆ 3182 ಗವರ್ನರ್ ದೇವಾನಂದ್ ರವರ ಮಾರ್ಗದರ್ಶನದಲ್ಲಿ ಜಿಲ್ಲಾ ಪ್ರಾಜೆಕ್ಟ್ ಗಳು ಇರುವುದರಿಂದ ಅದರ ನಿಟ್ಟಿನಲ್ಲಿ ಅಧ್ಯಕ್ಷರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದು ಅತ್ಯಮೂಲ್ಯವಾಗಿದೆ. ಹಾಗೆ ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು ದಿನೇ ದಿನೇ ಇನ್ನೂ ಹೆಚ್ಚಿನ ಜವಾಬ್ದಾರಿಗಳನ್ನು ಹಾಗೂ ಕಾರ್ಯಕ್ರಮಗಳನ್ನು ಮಾಡುವುದರಲ್ಲಿ ಪ್ರಮುಖ ಸ್ಥಾನ ಹೊಂದಿದೆ ಎಂದು ತಿಳಿಸಿದರು.
Rotary Shivamogga ಜೋನಲ್ ಲಿಪ್ಟಿನೆಂಟ್ ಮಂಜುನಾಥ್ ರಾವ್ ಕದಂ ಮಾತನಾಡಿ, ನೂತನ ತಂಡಕ್ಕೆ ಶುಭಾಶಯ ಕೋರಿ, ಜಿಲ್ಲೆಯಲ್ಲಿ ನಮ್ಮ ಕ್ಲಬ್ ಗಳು ಗುರುತಿಸಿಕೊಳ್ಳುವಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡಲು ಸದಾ ನಿಮ್ಮೆಲ್ಲರ ಜೊತೆ ನಾವಿರುತ್ತೇವೆ ಎಂದು ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಚಂದ್ರು.ಜೆ.ಪಿ,
ಮಾಜಿ ಜಿಲ್ಲಾ ಗವರ್ನರ್ ಜಿ.ಎನ್.ಪ್ರಕಾಶ್, ಮಾಜಿ ಅಸಿಸ್ಟೆಂಟ್ ಗವರ್ನರ್ ಕೊಟೋಜಿ ರವಿ, ಚೂಡಾಮಣಿ ಪವಾರ್, ಗುರುರಾಜ್, ಧರ್ಮೇಂದ್ರ ಸಿಂಗ್, ಬಸವರಾಜ್, ಜಗದೀಶ್, ರಾಜ ಸಿಂಗ್ ಎಲ್ಲಾ ರೋಟರಿ ಶಿವಮೊಗ್ಗ ಸೆಂಟ್ರಲ್ ಹಾಗೂ ನಗರದ ಎಲ್ಲಾ ರೋಟರಿ ಸದಸ್ಯರು, ಆನ್ಸ್ ಕ್ಲಬ್ ನ ಅಧ್ಯಕ್ಷರಾದ ಗೀತಾ ಜಗದೀಶ್ ಹಾಗೂ ಕಾರ್ಯದರ್ಶಿ ಶುಭ ಚಿದಾನಂದ್ ಹಾಗೂ ಸದಸ್ಯರು ಉಪಸಿತರಿದ್ದರು. ನೂತನವಾಗಿ ಆಯ್ಕೆಯಾದ ಕಾರ್ಯದರ್ಶಿ ಈಶ್ವರ್ ವಂದನಾರ್ಪಣೆ ಮಾಡಿದರು.