Thursday, April 24, 2025
Thursday, April 24, 2025

DVS College of Arts, Science and Commerce ಜನಪ್ರಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಜಿ.ನಾರಾಯಣ ರಾವ್ ನಿಧನ

Date:

DVS College of Arts, Science and Commerce ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಜಿ.ನಾರಾಯಣ ರಾವ್ ನಿಧನಕ್ಕೆ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಸೇರಿದಂತೆ ಡಿವಿಎಸ್ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.

ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಜಿ.ನಾರಾಯಣ ರಾವ್(69) ಶಿವಮೊಗ್ಗದ ಶರಾವತಿ ನಗರದ ನಿವಾಸದಲ್ಲಿ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಶನಿವಾರ ಅಂತ್ಯಕ್ರಿಯೆ ನಡೆಯಲಿದೆ.

ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಪ್ರೊ. ಜಿ.ನಾರಾಯಣ ರಾವ್ ಅವರು ಭದ್ರಾವತಿ ನ್ಯೂಟೌನ್ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ 28 ವರ್ಷ ಹಾಗೂ ಹೊಸಮನೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಪ್ರಾಧ್ಯಾಪಕ ವೃತ್ತಿಯ ನಂತರ ಬಹುರಾಷ್ಟ್ರೀಯ ಕಂಪನಿಗಳ ಸಿಇಒಗಳಿಗೆ ಆರ್ಥಿಕ ವಿಷಯಗಳ ಸಲಹೆಗಾರರಾಗಿ, ದೂರಶಿಕ್ಷಣ ಪಡೆಯುವವರಿಗೆ ಮಾರ್ಗದರ್ಶಕರಾಗಿ ಹಾಗೂ ಸಭೆ ಸಮಾರಂಭಗಳಲ್ಲಿ ವಿಶೇಷ ಉಪನ್ಯಾಸ ನೀಡುತ್ತಿದ್ದರು.

ರಾಜ್ಯ ಆರ್ಥಿಕ ಪರಿಷತ್ ಉಪಾಧ್ಯಕ್ಷರಾಗಿ, ಕರ್ನಾಟಕ ಅರ್ಥಶಾಸ್ತ್ರ ಸಂಘದ ನಿರ್ದೇಶಕ, ಶಿವಮೊಗ್ಗ ಎಕಾನಾಮಿಕ್ಸ್ ಫೋರಂ ಗೌರವಾಧ್ಯಕ್ಷ, ರಾಷ್ಟ್ರೀಯ ಮಟ್ಟದ ಆರ್ಥಿಕ ಸಂಘದ ಅಜೀವ ಸದಸ್ಯರಾಗಿದ್ದಾರೆ. ನೂರಾರು ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮಾರ್ಗದರ್ಶನ ಮಾಡಿದ್ದಾರೆ.

DVS College of Arts, Science and Commerce ಶೈಕ್ಷಣಿಕ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿಯೂ ಕೆಲಸ ಮಾಡಿದ್ದಾರೆ. ವಿದ್ವತ್ ಪ್ರಬಂಧಗಳನ್ನು ಮಂಡಿಸಿರುವ ಪ್ರೊ. ಜಿ.ನಾರಾಯಣ ರಾವ್ ನಿಧನ ತುಂಬಲಾರದ ನಷ್ಟ ಎಂದಿದ್ದಾರೆ.

ಶನಿವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಜಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನಕ್ಕೆ ಡಿವಿಎಸ್ ಕಲಾ, ವಿಜ್ಞಾನ ಮತ್ತು ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹಾಗೂ ಡಿವಿಎಸ್ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...