Shivamogga Weather Forecast ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ನದಿ ಮತ್ತು ಹಳ್ಳಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಸ್ ಪಿ ಮಿಥುನ್‌ಕುಮಾರ್ ನೆರೆಪೀಡಿತ ಪ್ರದೇಶಗಳಾದ ಶಿಕಾರಿಪುರದ ಅಂಜನಾಪುರ, ಕೊಟ್ಟ, ಕೊಡಸೂರು, ಸೊರಬದ ಅಂದವಳ್ಳಿ, ತಟ್ಟಿಗೆರೆ ಮತ್ತು ಸಾಗರದ ಸೈದೂರು, ಕೆಲವೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ನೆರೆ ಸಂಬಂಧ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.
ನೆರೆ ಪೀಡಿತ ಪ್ರದೇಶಗಳಲ್ಲಿ ನದಿ ನೀರಿಗೆ ಇಳಿಯುವುದು, ಈಜಾಡುವುದು, ಅಪಾಯಕಾರಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದು, ಫೋಟೋ , ಸೆಲ್ಫಿ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ವತಿಯಿಂದ ಬ್ಯಾರಿಕೇಡ್ ಗಳನ್ನು ಹಾಕಿ, ಫ್ಲೆಕ್ಸ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸಿ, ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ.
Shivamogga Weather Forecast ಅಪಾಯದ ಬಗ್ಗೆ ಸ್ಥಳೀಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದಿದ್ದಾರೆ.
ಸಾರ್ವಜನಿಕರು ಮತ್ತು ಹೊರ ಜಿಲ್ಲೆಯ ಪ್ರವಾಸಿಗರು ನೀರಿನ ಹರಿವು ಕಡಿಮೆಯಾಗುವವರೆಗೆ ಈ ಭಾಗದ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಾರದು. ನೆರೆ ಸಂಬಂಧ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ೧೧೨ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದಿದ್ದಾರೆ.