Saturday, December 6, 2025
Saturday, December 6, 2025

Ripponpet Police ಸುರಳಿಕೊಪ್ಪದಲ್ಲಿ ಕಂದಕಕ್ಕೆ ಉರುಳಿದ ಕಾರು: ಇಬ್ಬರಿಗೆ ಗಾಯ

Date:

Ripponpet Police ಹೊಸನಗರ ತಾಲ್ಲೂಕು ಸುರಳಿಕೊಪ್ಪದ ಬಳಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಬಗ್ಗೆ ವರದಿಯಾಗಿದೆ.
ರಿಪ್ಪನ್‌ಪೇಟೆ ಪೇಟೆ ಸಮೀಪ ಕೋಡೂರು ಬಳಿ ಸಿಗುವ ಸುರುಳಿಕೊಪ್ಪದಲ್ಲಿ ಈ ಘಟನೆ ನಡೆದಿದೆ.ರಿಪ್ಪನ್‌ಪೇಟೆ ಕಡೆಯಿಂದ Ripponpet Police ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಆ ಬಳಿಕ ಪಲ್ಟಿಯಾಗಿ 50 ಅಡಿ ಆಳದ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಜೀವಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಕಾರು ಪೂರ್ತಿಯಾಗಿ ಜಖಂಗೊಂಡಿದ್ದು ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...