Tuesday, February 3, 2026
Tuesday, February 3, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದ 50 ನೇ ಕ್ಯಾಪಸ್ ಕಟ್ಟೆ ಕಾರ್ಯಕ್ರಮ

Date:


Akashvani Bhadravati ಯುವ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕಾಗಿಯೇ ರೂಪಿತವಾದ ಆಕಾಶವಾಣಿ ಭದ್ರಾವತಿಯ ಕ್ಯಾಂಪಸ್‌ಕಟ್ಟೆ ೫೦ನೇ ಕಾರ್ಯಕ್ರಮವು ನೇರಪ್ರಸಾರದಲ್ಲಿ ಪ್ರಸಾರವಾಗಲಿದೆ.
ಕ್ಯಾಂಪಸ್‌ಕಟ್ಟೆ ಎನ್ನುವ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೇರಪ್ರಸಾರದಲ್ಲಿ ವಿವಿಧ ಮಹನೀಯರು, ಸಾಹಿತಿಗಳು, ಸಾಧಕರು ಮತ್ತು ಆಯ ಪ್ರದೇಶದ ವಿಶೇಷತೆಯನ್ನು ತಿಳಿಸುತ್ತಾರೆ. ಪ್ರತೀ ಕಾರ್ಯಕ್ರಮದಲ್ಲಿ ೬ ರಿಂದ ೮ ವಿದ್ಯಾರ್ಥಿಗಳು ಭಾಗವಹಿಸಿ ಮಾಹಿತಿ ನೀಡುತ್ತಾರೆ. ವಿದ್ಯಾರ್ಥಿಗಳು ಮಾಹಿತಿ ನೀಡಿದ ಮಹನೀಯರಿಗೆ ಸಂಬAಧಿಸಿದ ಪ್ರಶ್ನೆಗಳನ್ನು ಸಾರ್ವಜನಿಕರಿಗೆ ನೀಡಿ ಅವರಿಂದ ವಾಟ್ಸಪ್ ಮುಖಾಂತರ ಉತ್ತರ ಪಡೆದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಚಿತ್ರಗೀತೆಗಳ ಸಂಗಮವಾದ ಈ

Akashvani Bhadravati ಕಾರ್ಯಕ್ರಮದಲ್ಲಿ ಇದುವರೆಗೆ ವಿವಿಧ ಕಾಲೇಜಿನ ೪೦೦ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಕಾಲೇಜಿನಿಂದ ನೇರಪ್ರಸಾರದಲ್ಲಿ ಭಾಗವಹಿಸಿದ್ದು ಈ ಕಾರ್ಯಕ್ರಮದ ಹೆಗ್ಗಳಿಕೆ. ೨೫.೦೭.೨೦೨೪ರ ಗುರುವಾರ ಬೆಳಿಗ್ಗೆ ೧೦ಗಂಟೆಯಿಂದ ೧೧ಗಂಟೆವರೆಗೆ MPMES ಸ್ವತಂತ್ರ ಪದವಿಪೂರ್ವಕಾಲೇಜು ಭದ್ರಾವತಿಯ ಕ್ಯಾಂಪಸ್‌ ನೇರಪ್ರಸಾರದಲ್ಲಿ ಪ್ರಸಾರವಾಗಲಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಈ ೫೦ನೇ ಕಾರ್ಯಕ್ರಮ ಪ್ರಸಾರವಾಗುತ್ತಿರುವುದನ್ನು ತಿಳಿಸಲು ಹೆಮ್ಮೆ ಆಗುತ್ತದೆ ಎಂದು ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು FM 103.5 ಹಾಗೂ MW 675 khz ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತAkashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...