Sunday, August 23, 2026
Sunday, August 23, 2026

Forest Department ಕಿರುಗುಣಸೆ ಗ್ರಾಮದಲ್ಲಿ ಬೇಲಿ ಉರುಳಿಗೆ ಚಿರತೆ ಬಲಿ

Date:

Forest Department ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರೊಬ್ಬರು ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ.

Forest Department ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು 4 ವರ್ಷದ ಗಂಡು ಚಿರತೆ ಮೃತಪಟ್ಟಿದ್ದು, ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಎಲ್. ಪರಶುರಾಮ್, ಉಪವಲಯ ಅರಣಯಾಧಿಕಾರಿಗಳಾದ ಜಿ. ಪರಶುರಾಮ್, ರಾಮಪ್ಪ, ಗಸ್ತು ಅರಣ್ಯಪಾಲಕರಾದ ಹರೀಶ್, ಆನಂದ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಈ ಸಂಬಂಧ ಜಮೀನಿನ ಮಾಲಿಕ ರಾಜು ಸಿ. ಕಳತ್ತೂರು ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಮೃತ ಚಿರತೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...