Friday, June 13, 2025
Friday, June 13, 2025

Central Budget  ನೀತಿ ಆಯೋಗ ಸಭೆಗೆ ಕರ್ನಾಟಕ ಸೇರಿ 7 ರಾಜ್ಯಗಳ ಬಹಿಷ್ಕಾರ

Date:

Central Budget  ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಇಂದು (ಜು.27) ನಡೆಯಲಿರುವ ನೀತಿ ಆಯೋಗದ ಸಭೆಗೆ ಕರ್ನಾಟಕ ಸಹಿತ ಏಳು ರಾಜ್ಯಗಳು ಬಹಿಷ್ಕಾರ ಹಾಕಿವೆ.
ಕರ್ನಾಟಕದ ಮಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು, ತೆಲಂಗಾಣದ ಎ. ರೇವಂತ್ ರೆಡ್ಡಿ, ತಮಿಳುನಾಡಿನ ಎಂ.ಕೆ ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್ ಮತ್ತು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಅವರು ಸಭೆಗೆ ಹಾಜರಾಗುವುದು ಅಸಾಧ್ಯವಾಗಿದೆ. ಆದರೆ, ದೆಹಲಿ ಸರ್ಕಾರ ಕೂಡ ಸಭೆಯನ್ನು ಬಹಿಷ್ಕರಿಸಿದೆ.
‘ವಿಕಸಿತ ಭಾರತ @ 2047’ ಎಂಬುವುದು ಈ ವರ್ಷದ ನೀತಿ ಆಯೋಗದ ಥೀಮ್ ಆಗಿದೆ. ಕೇಂದ್ರ ಸರ್ಕಾರ ‘ಮೇಕಿಂಗ್ ಇಂಡಿಯಾ’ಕ್ಕೆ ಹೆಚ್ಚು ಒತ್ತು ಕೊಡುವ ಗುರಿ ಹೊಂದಿದೆ.

ಮಮತಾ, ಸೊರೇನ್ ಭಾಗಿ?:

Central Budget  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಬಜೆಟ್‌ನಲ್ಲಿ ತಾರತಮ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಮತಾ ಬ್ಯಾನರ್ಜಿ ಗುರುವಾರವೇ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಪ್ರಯಾಣ ರದ್ದುಗೊಳಿಸಿದ್ದಾರೆ. ಹಾಗಾಗಿ, ಸಭೆಯಲ್ಲಿ ಭಾಗಿಯಾಗುತ್ತಾರೋ, ಇಲ್ಲವೋ ಎಂಬುವುದು ಖಚಿತವಾಗಿಲ್ಲ.

ನೀತಿ ಆಯೋಗ ರದ್ದತಿಗೆ ಮಮತಾ ಬ್ಯಾನರ್ಜಿ ಆಗ್ರಹ:

ನೀತಿ ಆಯೋಗ ರದ್ದುಪಡಿಸಿ ಈ ಹಿಂದಿನ ಯೋಜನಾ ಆಯೋಗವನ್ನು ಮರುಸ್ಥಾಪಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ನೀತಿ ಆಯೋಗ ಆಧಾರರಹಿತವಾಗಿದೆ. ಅದು ಕೇವಲ ಸಭೆಗಳನ್ನು ನಡೆಸುವುದಕ್ಕಷ್ಟೇ ಸೀಮಿತವಾಗಿದೆ ಎಂದು ದೂರಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...