Chudanatha Iyer ಸುಮಾರು ನಾಲ್ಕು ದಶಕಗಳ ಕಾಲ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದ ಹಿರಿಯ ಪತ್ರಕರ್ತ ಜಿ.ವಿ. ಚೂಡಾನಾಥ್ ಅಯ್ಯರ್ ನಿಧನ ಹೊಂದಿದರು.ಅವರಿಗೆ 78 ವರ್ಷ ವಯಸ್ಸಾಗಿತ್ತು .
ಹೊಸದಿಗಂತ ದಿನ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾಗಿದ್ದ ಅವರು, 35 ವರ್ಷಕ್ಕೂ ಹೆಚ್ಚು ಕಾಲದಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದ ಚೂಡಾನಾಥ್ ಅಯ್ಯರ್ ಅವರು ನಾಲ್ಕು ವರ್ಷಗಳ ಹಿಂದೆ ಪತ್ರಿಕೋದ್ಯಮದಿಂದ ನಿವೃತ್ತಿಗೊಂಡು ವಿಶ್ರಾಂತಿ ಜೀವನ ನಡೆಸುತ್ತಿದ್ದರು.
ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಯೋ ಸಹಜ ಕಾಯಿಲೆಯಿಂದ ತೀವ್ರ ಅಸ್ವಸ್ಥರಾಗಿ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದಿವಂಗತರು ಇಬ್ಬರು ಪುತ್ರರು, ಓರ್ವ ಪುತ್ರಿ, ಪತ್ನಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದು ಅವರ ನಿಧನದಿಂದ ಜಿಲ್ಲೆಯು ಹಿರಿಯ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ.
ಮೃತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿದ್ದರು.ರಾಜ್ಯ ಸಣ್ಣ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್‍ಯದರ್ಶಿಯಾಗಿ, ಅಧ್ಯಕ್ಷರಾಗಿ ಮತ್ತು ವಿವಿಧ ಸಂಘ ಸಂಸ್ಥೆಗಳ ಒಡನಾಡಿಯಾಗಿ ಸೇವೆ ಸಲ್ಲಿಸಿದರು.
ಕರ್ನಾಟಕ ರಾಜ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.
Chudanatha Iyer ಅಯ್ಯರ್ ನಿಧನದ ಸುದ್ದಿ ತಿಳಿದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಶಾಸಕ ತಮ್ಮಯ್ಯ , ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಬೋಜೇಗೌಡ,ಮಾಜಿ ಸಚಿವರಾದ ಸಗೀರ್ ಅಹಮ್ಮದ್,ಬಿ.ಬಿ.ನಿಂಗಯ್ಯ ,ಕೆ.ಪಿ. ಸಿ.ಸಿ. ವಕ್ತಾರ ಎಚ್.ಎಚ್. ದೇವ ರಾಜ್,ಸಿ.ಪಿ.ಐ.ಬಿ.ಅಮ್ಜದ್ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖರು ಸಂಘ ಸಂಸ್ಥೆಗಳ ಮುಖಂಡರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ಕ್ರಾಂತಿದೀಪ ಸಂತಾಪ:ಚೂಡಾನಾಥ್ ಅಯ್ಯರ್ ಅವರ ನಿಧನಕ್ಕೆ ಕ್ರಾಂತಿದೀಪ ಬಳಗ ಸಂತಾಪ ಸೂಚಿಸಿದ್ದು ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ.