DK Shivakumar fans club ಉಳುವವನೆ ಹೊಲದೊಡೆಯ, ವಾಸಿಸುವವನೆ ಮನೆಯೊಡೆಯ ಕಾಯ್ದೆ ಜಾರಿ ಸೇರಿದಂತೆ ವಿವಿಧ ಜನಪರಕಾರ್ಯಗಳ ಮೂಲಕ ಹೆಗ್ಗಳಿಕೆಗೆ ಪಾತ್ರರಾಗಿರುವ ಹಿರಿಯ ಸಮಾಜವಾದಿ, ಪ್ರಗತಿಪರ ಚಿಂತಕ, ಸಾಮಾಜಿಕ ಹೋರಾಟಗಾರರಾಗಿರುವ ಮಾಜಿ ಸಚಿವ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಂದಾಯ ಸಚಿವರಾಗಿದ್ದಾಗ ಮಲೆನಾಡು ಭಾಗದ ಅರಣ್ಯ ಭೂಮಿಯ ಸಮಸ್ಯೆಗೆ ಸಂಬಂಧಿಸಿದಂತೆ ಕಾಗೋಡು ತಿಮ್ಮಪ್ಪನವರು ಕೈಗೊಂಡ ದಿಟ್ಟ ಕ್ರಮಗಳಿಂದಾಗಿ ಸಾವಿರಾರು ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ವಿಧಾನಸಭಾಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ವಪಕ್ಷದವರಿಗೂ ಅಚ್ಚುಮೆಚ್ಚಿನವರಾಗಿದ್ದ ಕಾಗೋಡು ತಿಮ್ಮಪ್ಪನವರು ಸರ್ಕಾರ ಅಥವಾ ಮಂತ್ರಿಗಳ ನಡೆ ತಪ್ಪು ಎಂದು ಕಂಡು ಬಂದಲ್ಲಿ ಅದನ್ನು ವ್ಯಕ್ತಿಯಾಗಿದ್ದರು.
DK Shivakumar fans club ಸದನದಲ್ಲಿಯೇ ಪ್ರಸ್ತಾಪಿಸಿ ಸರಿ ಪಡಿಸಲು ಸೂಚಿಸುತ್ತಿದ್ದಂತಹ ಮೇಧಾವಿ, ಪಕ್ಷಾತೀತ ರಾಜಕಾರಣಿಯಾಗಿದ್ದಾರೆ ಎಂದರು.
ಆದ್ದರಿಂದ ಇವರಿಗೆ ಗೌರವ ಡಾಕ್ಟರೇಟ್ ನೀಡುವ ಸಂಬಂಧ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಆರ್. ಮೋಹನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರಲ್ಲಿ ಕೋರಿದ್ದಾರೆ.