Tuesday, March 24, 2026
Tuesday, March 24, 2026

Hadonahalli village ಹಾಡೋನಹಳ್ಳಿ ರಸ್ತೆ ದುರಸ್ತಿ ಮಾಡಲು ಗ್ರಾಮಸ್ಥರ ಮನವಿ

Date:

Hadonahalli village ಶಿವಮೊಗ್ಗ ತಾಲೂಕು ಹಾಗೂ ಜಿಲ್ಲಾ ಕೇಂದ್ರದ ಕೊನೆಯ ಭಾಗದಲ್ಲಿರುವ ಹಾಡೋನಹಳ್ಳಿ ಗ್ರಾಮದ ಮುಖ್ಯರಸ್ತೆ ಸಂಪೂರ್ಣ ಹಾಳಾಗಿದ್ದು ಗುಂಡಿಗಳಿಂದ ಮುಳುಗಿಹೋಗಿದೆ. ಕೂಡಲೇ ಅತಿವೃಷ್ಟಿ ಹಿನ್ನೆಲೆ ಹಾಗೂ ಗ್ರಾಮದ ಜನರ ಮತ್ತು ವಿದ್ಯಾರ್ಥಿಗಳ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಮಳೆ ನಿಂತ ತಕ್ಷಣ ರಸ್ತೆಯನ್ನು ನವೀಕರಣ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹಾಡೋನಹಳ್ಳಿ ಗ್ರಾಮಕ್ಕೆ ಶಿವಮೊಗ್ಗ ಹೊನ್ನಾಳಿ ರಸ್ತೆಯ ಭಾಗದಿಂದ ಸೇರುವ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಸುಮಾರು ಎರಡೂವರೆ ಕಿಲೋಮೀಟರ್ ದೂರದ ಈ ರಸ್ತೆಯಲ್ಲಿ ಊರಿನ ಎಲ್ಲಾ ವಾಹನಗಳು ಹಾಗೂ ಸರ್ಕಾರಿ ಬಸ್ ಗಳು ನಿತ್ಯ ಸಂಚರಿಸುತ್ತಿದ್ದು, ಶಾಲಾ ವಾಹನಗಳು ಸಹ ಇಲ್ಲಿಗೆ ಬರುತ್ತವೆ. ಈ ರಸ್ತೆ ಅತ್ಯಂತ ಕಿರಿದಾಗಿದ್ದು ಮಗ್ಗುಲಿನಲ್ಲೇ ವಿದ್ಯುತ್ ಕಂಬಗಳು ಇರುವುದರಿಂದ ನಿತ್ಯ ಆತಂಕ ವಾಹನ ಚಾಲಕರಲ್ಲಿ ಮನೆ ಮಾಡಿದೆ.
ಈ ಎರಡುವರೆ ಕಿಲೋಮೀಟರ್ ದೂರವನ್ನು ಸುಮಾರು ಮುಕ್ಕಾಲು ಗಂಟೆಗಳ ಕಾಲ ಸಂಚರಿಸಬೇಕಾದಷ್ಟು ಪ್ರಮಾಣದ ಗುಂಡಿಗಳು Hadonahalli village ಈ ರಸ್ತೆಯಲ್ಲಿ ಎದ್ದು ಕಾಣುತ್ತವೆ. ಹಾಗಾಗಿ ಕೂಡಲೇ ಈ ರಸ್ತೆ ದುರಸ್ತಿಗೆ ಮುಂದಾಗಬೇಕೆಂದು ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಗ್ರಾಮದ ನೂರಾರು ಜನರ ಸಹಿಗಳೊಂದಿಗೆ ಮನವಿ ಪತ್ರವನ್ನು ಮುಖಂಡರು ಸಲ್ಲಿಸಿದರು.
ಈ ಮನವಿಯಲ್ಲಿ ಗ್ರಾಮದ ಗಿರಿಜಾಬಾಯಿ ಓಂ ಶಿವಾಜಿ ರಾವ್ ಅವರ ಮನೆಯಿಂದ ಆಲಕಟ್ಟೆ ಚೌಡಮ್ಮನ ದೇವಸ್ಥಾನದವರೆಗೆ ಕೂಡಲೇ ರಸ್ತೆ ದುರಸ್ತಿ ಮಾಡಬೇಕೆಂದು, ನವೀಕರಣಕ್ಕೆ ಅನುಕೂಲ ಮಾಡಿಕೊಡಲು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಈ ರಸ್ತೆಯ ದುರಸ್ತಿಗೆ ಸೂಚಿಸಲಾಗುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಗ್ರಾಮದ ಡಿ ಸಿ ಜಗದೀಶ್ವರ್, ಕೆ ಎಸ್ ಈಶ್ವರಪ್ಪ, ಎಚ್ ಎಮ್ ಮಧು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...