Chamber Of Commerce ಕುಟಂಬ ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆ ದೂರವಾಗಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.
ನಗರದ ಐಎಂಎ ಸಭಾಂಗಣದಲ್ಲಿ ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆ, ಕ್ರೀಡೆ ಹಾಗೂ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರು ತಮ್ಮದೇ ಆದ ವ್ಯವಹಾರದಲ್ಲಿ ತೊಡಗಿರುತ್ತಾರೆ. ಒತ್ತಡದ ಜೀವನಶೈಲಿಯಲ್ಲಿ ಒಂದಿಷ್ಟ ಮನರಂಜನೆ, ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ಹೊಸ ಚೈತನ್ಯ ನೀಡುತ್ತದೆ. ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಸಿಗುತ್ತದೆ ಎಂದು ತಿಳಿಸಿದರು.
ಭಾವಸಾರ ಇಂಡಿಯಾ ವಿಷನ್ ಸಂಸ್ಥೆಯ ಸದಸ್ಯರು ಕರೋನಾ ಸಂದರ್ಭದಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ. ಸಂಸ್ಥೆಯಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ನೀಡುವ ಶಕ್ತಿ ದೊರಕಲಿ ಎಂದು ಆಶಿಸಿದರು.
Chamber Of Commerce ಅಂತ್ಯಾಕ್ಷರಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಹಳೇ ಚಿತ್ರಗೀತೆಗಳನ್ನು ಹಾಡಿ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷ ದಿನೇಶ್ ಕುಂಟೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಜತೆಯಲ್ಲಿ ಸದಸ್ಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯದರ್ಶಿ ಡಿ.ಪಿ.ಕಮಲಾಕರ, ಚೇತನಾ ಅಂಬೋರೆ, ಸುನೀಲ್ ಬೇಂದ್ರೆ, ಡಿ.ಎನ್.ವಿನಾಯಕ, ಪಾಂಡುರಂಗ ಕುಂಟೆ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.