Thursday, March 19, 2026
Thursday, March 19, 2026

Independence day ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ ಆಗಸ್ಟ್ ನಲ್ಲಿ ಪುಸ್ತಕ ಪಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇ.50 ರಿಯಾಯಿತಿ

Date:

Independence day ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2024 ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.
Independence day ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...