Linganamakki Dam ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಶರಾವತಿ ನದಿಯ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು.
ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. 1,814 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಇನ್ನೂ 5 ಅಡಿ ಬಾಕಿ ಇರುವಾಗಲೇ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
Linganamakki Dam ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಜಲ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಒಟ್ಟು ನಾಲ್ಕು ವಿದ್ಯುತ್ ಘಟಕಗಳಿಂದ ಸುಮಾರು 1469.29 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಜಲಾಶಯದಿಂದ ನದಿಗೆ ನೀರು ಬಿಡುವುದನ್ನು ನೋಡಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.