Friday, March 20, 2026
Friday, March 20, 2026

S.N. Channabasappa ಗೋಪಶೆಟ್ಟಿಕೊಪದಲ್ಲಿ 1836 ಮನೆಗಳ ನಿರ್ಮಾಣ ತುರ್ತಾಗಿ ಆರಂಭಿಸಿ- ಶಾಸಕ ಚೆನ್ನಿ

Date:

S.N. Channabasappa ಗೋಪಶೆಟ್ಟಿಕೊಪ್ಪದಲ್ಲಿ 1836 ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕಾಮಗಾರಿ ಆರಂಭಿಸಬೇಕು. ಗೋವಿಂದಾಪುರದಲ್ಲಿ ಈಗಾಗಲೇ ನಿರ್ಮಿಸಿ ಹಂಚಿಕೆ ಮಾಡಲಾಗಿರುವ 724 ಮನೆಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಪ್ರತ್ಯೇಕ ವಿದ್ಯುತ್ ಸರಬರಾಜು ಯೋಜನೆ, ಕಸವಿಲೇವಾರಿ ವಾಹನವನ್ನು ಒದಗಿಸಬೇಕು. ಉಳಿದ ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕ್ರಮವಹಿಸಲು ಕಾಲಮಿತಿಯನ್ನು ಶಾಸಕ ಎಸ್ ಎನ್ ಚನ್ನಬಸಪ್ಪ ನಿಗದಿ ಪಡಿಸಲು ಸೂಚಿಸಿದರು.

ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ೪೮೩೬ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತೆ ಡಾ|| ಕವಿತಾ ಹಾಗೂ ಆಶ್ರಯ ಯೋಜನೆಯ ಅಧಿಕಾರಿಗಳೊಂದಿಗೆ ಈ ಸಭೆ ನಡೆಯಿತು.

S.N. Channabasappa ಅತೀವೃಷ್ಠಿ ಹಾನಿಯಿಂದ ಮನೆಗಳು ಬಿದ್ದಿರುವ ಬಗ್ಗೆ ತುರ್ತಾಗಿ ಪರಿಹಾರ ನೀಡಲು ಮತ್ತು ಅನಧಿಕೃತ ಮನೆಗಳಿಗೆ ವಿಶೇಷ ಪರಿಹಾರ ಒದಗಿಸಬೇಕು. ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ನೀಡಲು ಬಾಕಿಯಿರುವ ಪ್ರಕರಣಗಳನ್ನು ತುರ್ತಾಗಿ ಕ್ರಮವಹಿಸಬೇಕು. ಎಂದು ಸೂಚಿಸಿದರು.
ಮಹಾನಗರ ಪಾಲಿಕೆ, ಮೆಸ್ಕಾಂ. ನೀರು ಸರಬರಾಜು, ಸ್ಲಂ ಬೋರ್ಡ್ನ ಅಧಿಕಾರಿಗಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...