Monday, April 21, 2025
Monday, April 21, 2025

CM Siddharamaih ಷೋಕಾಸ್ ನೋಟೀಸು ಕೊಟ್ಟಿರುವುದು ಕಾನೂನು ಬಾಹಿರ- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaih ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ಅವರು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು.

ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

CM Siddharamaih ಟಿ. ಜೆ.ಅಬ್ರಹಾಂ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ.

ದಿನಾಂಕ : 26-7.2024 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ.
ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ.

ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ, ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ.
ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ.

ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...