Tuesday, February 3, 2026
Tuesday, February 3, 2026

Nijasharana Ambigara Chowdaiah Development ವಿವಿಧ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನ

Date:

Nijasharana Ambigara Chowdaiah Development ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸಬರಿಗೆ ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು (ಹೊಸಬರಿಗೆ ಮತ್ತು ನವೀಕರಣ), ಗಂಗಾಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ /ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
Nijasharana Ambigara Chowdaiah Development ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿರಬಾರದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...