High Court ಸರ್ಕಾರಿ ಕಚೇರಿಗಳಲ್ಲಿ ಲಂಚ, ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರಿ ಕಚೇರಿಗಳಲ್ಲಿ ಹೈಕೋರ್ಟ್ ಆದೇಶದನ್ವಯ ನಗದು ಘೋಷಣೆ ರಿಜಿಸ್ಟರ್’ ನಿರ್ವಹಣೆ ಮಾಡಬೇಕೆಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.
ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಲ್ಲಿ ನಗದು ಘೋಷಣೆ ರಿಜಿಸ್ಟರ್ ಅನ್ನು ನಿರ್ವಹಿಬೇಕು ಎಂದು ಸುತ್ತೋಲೆ ಹೊರಡಿಸಿದೆ. ಸರಕಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರು ತಮ್ಮ ಬಳಿ ಇರುವ ನಗದು ಹಣವನ್ನು ಪ್ರತಿದಿನ ಬೆಳಿಗ್ಗೆ, ರಿಜಿಸ್ಟರ್ ನಲ್ಲಿ ಸ್ವಯಂ ಘೋಷಣೆ ಮಾಡಬೇಕು ಎಲ್ಲಾ ಸರಕಾರಿ ಕಚೇರಿಗಳಲ್ಲಿ, ನಿಗಮ ಮಂಡಳಿಗಳಲ್ಲಿ ನಗದು ಘೋಷಣಾ ವಹಿಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ದಿಢೀರ್ ತಪಾಸಣೆ ನಡೆಸಿದಾಗ ನೌಕರರು ನಗದು ಘೋಷಣಾ ರಿಜಿಸ್ಟರ್ ನಲ್ಲಿ ನಗದನ್ನು ದಾಖಲಿಸದೆ ಇರುವ ಪ್ರಸಂಗ ಬೆಳಕಿಗೆ ಬಂದಿತ್ತು. ವಿಚಾರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಿ ಮೈಸೂರಿನ ವಿಶೇಷ ಸೆಷನ್ಸ್ ನ್ಯಾಯಾಲಯದಲ್ಲಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಲೋಕಾಯುಕ್ತ ಅಧಿಕಾರಿಗಳು ದೋಷಾರೋಪಣ ಪತ್ರ ಸಲ್ಲಿಸಿದ ಬೆಳಕಿನಲ್ಲಿ ತಪ್ಪಿತಸ್ಥ ನೌಕರರ ವಿರುದ್ಧ ಇಲಾಖಾ ವಿಚಾರಣೆಯನ್ನು, ಕೂಡ ಕೈಗೊಳ್ಳಲಾಯಿತು.
High Court ಮೈಸೂರು ಮಹಾನಗರ ಪಾಲಿಕೆಯಲ್ಲಿ ನಗದು ಘೋಷಣ ವಹಿಯನ್ನು ನಿರ್ವಹಿಸದೇ ಇರುವುದರಿಂದ ತಾವು ನಗದು ಫೋಷಣೆ ಮಾಡಿಲ್ಲವೆಂಬ ಆರೋಪಿಗಳ ವಾದವನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯ ಅವರನು, ದೋಷ ಮುಕ್ತರನ್ನಾಗಿ ಮಾಡಿತ್ತು. ವಿಶೇಷ ನ್ಯಾಯಾಲಯದಲ್ಲಿ ಆರೋಪಿಗಳು ದೋಷ ಮುಕ್ತರಾದರೂ ಇಲಾಖಾ ವಿಚಾರಣೆ ಮುಂದುವರೆಯಿತು.