Vinesh Phogat ಕೇವಲ 100 ಗ್ರಾಂ ತೂಕ ಹೆಚ್ಚಾಗಿರುವ ಕಾರಣಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದ ಕುಸ್ತಿ ಫೈನಲ್ಸ್‌ನಿಂದ ಹೊರಬಿದ್ದ ಬಗ್ಗೆ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ.
ಖ್ಯಾತ ಯೂಟ್ಯೂಬರ್ ಧೃವ್ ರಾಠಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉದ್ಯಮಿ ಆನಂದ್ ಮಹೇಂದ್ರ ಸೇರಿದಂತೆ ಹಲವರು ಈ ಬಗ್ಗೆ ಘಾತ ವ್ಯಕ್ತಪಡಿಸಿದ್ದಾರೆ.
“ಕೇವಲ 100 ಗ್ರಾಂಗೆ? ಇದು ತುಂಬಾ ನಂಬಲಾಗದಂತಿದೆ.. ತಲೆ ಬೋಳಿಸುವ ಮೂಲಕ ಅಷ್ಟು ತೂಕವನ್ನು ಕಡಿಮೆ ಮಾಡಬಹುದು” ಎಂದು ಧೃ ವ್ ರಾಠಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿನೇಶಾ ಫೋಗಟ್ ಅನರ್ಹತೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, “ಭರವಸೆ ಕಳೆದುಕೊಳ್ಳಬೇಡಿ, ಧೃಡವಾಗಿ ಹಿಂತಿರುಗಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ.
Vinesh Phogat ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ. ಅದೇ ಸಮಯದಲ್ಲಿ, ನೀವು ಸ್ಥಿತಿಸ್ಥಾಪಕತ್ವವನ್ನು ಸಾರುತ್ತೀರಿ ಎಂದು ನನಗೆ ತಿಳಿದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ” ಎಂದು ಬರೆದುಕೊಂಡಿದ್ದಾರೆ.
ಭಾರತದ ಏಸ್ ಗ್ರಾಪ್ಲರ್ ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ ಗೇಮ್ಸ್‌ನಿಂದ ಅನರ್ಹಗೊಳಿಸಿರುವ ಬಗ್ಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇಂದು ಪ್ರತಿಕ್ರಿಯಿಸಿದ್ದು, “ಇದು ಕೆಟ್ಟ ಕನಸು” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.