Bhadravatisanchi Honnamma Girls Government Pre-Graduation College ಭದ್ರಾವತಿಯ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆಯನ್ನು ನೂತನವಾಗಿ ಆರಂಭಿಸಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳೊಂದಿಗೆ ಕಂಪ್ಯೂಟರ್ ಸೈನ್ಸ್ ನ್ನು ಐಚ್ಛಿಕ ವಿಷಯವಾಗಿ ವ್ಯಾಸಂಗ ಮಾಡಲಿದ್ದಾರೆ. ನೂತನವಾಗಿ ಆರಂಭಿಸಿರುವ ಈ Bhadravatisanchi Honnamma Girls Government Pre-Graduation College ಸಂಯೋಜನೆಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಇವರ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಸಿದ್ಧಲಿಂಗ ಮೂರ್ತಿಯವರು ಭದ್ರಾವತಿಯ ನಾಗರೀಕರು ಈ ಹೊಸ ಸಂಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರಾದ ರೊ.ಮುಸ್ತಾಕ್ ಅಲಿಶಾ ಹಾಗೂ ಕಾಲೇಜಿನ ಉಪನ್ಯಾಸಕ ಸಿಬ್ಬಂದಿ ಉಪಸ್ಥಿತರಿದ್ದರು.
Bhadravati sanchi Honnamma Girls Government Pre-Graduation College ಸಂಚಿಹೊನ್ನಮ್ಮ ಪ.ಪೂ.ಕಾಲೇಜಿನಲ್ಲಿ ಕಂಪ್ಯೂಟರ್ ವಿಭಾಗ ಆರಂಭ-ಡಾ.ಸಿದ್ಧಲಿಂಗ ಮೂರ್ತಿ
Date: