Wednesday, August 26, 2026
Wednesday, August 26, 2026

Rotary Club Shivamogga ಪ್ರತಿಭಾವಂತರು ಬಹಳ ಜನ ಸರ್ಕಾರಿ ಶಾಲೆಗಳಲ್ಲೇ ಓದ್ದಿದ್ದಾರೆ-ರೂಪಾ ಪುಣ್ಯಕೋಟಿ

Date:

Rotary Club Shivamogga ಹೆಚ್ಚು ಪ್ರತಿಭಾವಂತರು ಹೊರಹೊಮ್ಮಿರುವುದು ಸರಕಾರಿ ಶಾಲೆಗಳಿಂದಲೇ. ಅದ್ದರಿಂದ ಸರಕಾರಿ ಶಾಲೆ, ಕಾಲೇಜು ಎಂಬ ಕೀಳಿರಿಮೆಯನ್ನು ಬಿಟ್ಟು ಅಧ್ಯಯನದ ಕಡೆಗೆ ಹೆಚ್ಚಿನ ಗಮನ ನೀಡಿದರೆ ಸಾಧನೆ ಮಾಡಲು ಎಲ್ಲರಿಂದಲೂ ಸಾಧ್ಯ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷೆ ರೋ.ರೂಪಾಪುಣ್ಯಕೋಟಿ ಅಭಿಪ್ರಾಯಪಟ್ಟರು.
ಶ್ರಾವಣಮಾಸದ ಹಿನ್ನೆಲೆಯಲ್ಲಿ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ೮ ಸೇವಾ ಕಾರ್ಯಕ್ರಮಗಳಲ್ಲಿ ಒಂದಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಕಕ ಪರೀಕ್ಷೆಗಳ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿ ಮಾತನಾಡಿದರು.
ದೇಶದಲ್ಲಿ ಸಾಧನೆಗೈದ ಹಿರಿಯರೆಲ್ಲರೂ ಸರಕಾರಿ ಶಾಲೆಗಳಲ್ಲಿಯೇ ಕಲಿತರು ಎಂಬುದನ್ನು ಯಾರೂ ಮರೆಯಬಾರದು. ಸರಕಾರದಿಂದಲೂ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿ ಕಲಿಯುವ ವಾತವರಣವನ್ನು ಸ್ಪಷ್ಟಿ ಮಾಡಲಾಗಿದೆ. ಅದನ್ನು ನಾವು ಸಮರ್ಥವಾಗಿ ಸದುಪಯೋಗ ಮಾಡಿಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿನಿಯರು ಚೆನ್ನಾಗಿ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ವಿಜ್ಞಾನ ವಿಭಾಗದಲ್ಲಿ ಸರಕಾರಿ ಶಾಲೆಯ ಉಪನ್ಯಾಸಕರು ಅತ್ಯಂತ ಸಮರ್ಥವಾಗಿ ಪಾಠ ಪ್ರವಚನಗಳನ್ನು ಮಾಡುತ್ತಾರೆ. ನಗರದಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರು ಇದ್ದಾರೆ. ಆದರೆ, ಅವರ ಜ್ಞಾನದ ಸದುಪಯೋಗ ಪಡೆಯಲು ಮಕ್ಕಳು ಮುಂದಾಗಬೇಕು. ಯಾವುದೇ ಉಪನ್ಯಾಸಕರ ಸಮರ್ಥ ಜ್ಞಾನವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡರೆ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ ಎಂದು ಹೇಳಿದರು.
Rotary Club Shivamogga ಈ ಸಂದರ್ಭದಲ್ಲಿ ಕ್ಲಬ್‌ನ ಮಾಜಿ ಅಧ್ಯಕ್ಷ ರೋ.ಎಸ್.ಆರ್.ಲಕ್ಷ್ಮೀನಾರಾಯಣ ಮಾತನಾಡಿ, ವಿದ್ಯಾರ್ಥಿಗಳ ಅಧ್ಯಯನ ಆಸಕ್ತಿಯನ್ನು ಇನ್ನಷ್ಟು ಹುರುದುಂಬಿಸಲು ರೋಟರಿ ಉಚಿತ ಪುಸ್ತಕ ವಿತರಣೆ ಮಾಡಿದೆ. ಮುಂದಿನ ದಿನಗಳಲ್ಲಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಇನ್ನಷ್ಟು ಅಗತ್ಯ ಸೌಲಭ್ಯ ನೀಡಲು ರೋಟರಿ ಕ್ಲಬ್ ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಎಸ್.ಜಯಂತ್ ಅವರು ಮಾತನಾಡಿ, ರೋಟರಿ ಸಂಸ್ಥೆಗಳು ಸರಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಿವೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ನೀಡುತ್ತಿದ್ದಾರೆ. ಇದನ್ನು ವಿದ್ಯಾರ್ಥಿನಿಯರು ಉಪಯೋಗಿಸಿಕೊಂಡು ಉತ್ತಮ ಫಲಿತಾಂಶ ತರಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೋ.ಡಾ.ಪ್ರಕೃತಿ, ರೋ.ಭಾರದ್ವಾಜ್, ರೋ.ಸತ್ಯನಾರಾಯಣ್, ರೋ.ವಾಗೀಶ್, ರೋ.ಸತೀಶ ಹಾಗೂ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...