Friday, November 22, 2024
Friday, November 22, 2024

D. Devaraja Arasu ಆಗಸ್ಟ್ 20 ರಂದು ದೇವರಾಜ ಅರಸು & ನಾರಾಯಣ ಗುರು ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು- ಡೀಸಿ ಗುರುದತ್ತ ಹೆಗಡೆ

Date:

D. Devaraja Arasu ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಆಚರಿಸಲಾಗುವುದು. ಜಯಂತಿಯು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರುಸುರವರ ಜನ್ಮ ದಿನಾಚರಣೆ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಲು ಸೂಚಿಸಿದ ಅವರು, ಡಿ.ದೇವರಾಜ ಅರಸು ಮತ್ತು ನಾರಾಯಣ ಗುರುರವರ ಜಯಂತಿಗಳು ಒಂದೇ ದಿನ ಇರುವ ಕಾರಣ ವಿವಿಧ ಸಂಘಟನೆಗಳು ತಮ್ಮ ಪೂರ್ವಭಾವಿ ಸಭೆ ಮುಗಿದ ಬಳಿಕೆ ಎಲ್ಲಿ ಮತ್ತು ಯಾವ ಸಮಯದಲ್ಲಿ ಜಯಂತಿಗಳನ್ನು ಆಚರಿಸಬೇಕೆಂದು ಸಲಹೆ ನೀಡುವಂತೆ ತಿಳಿಸಿದರು.

ಹಾಗೂ ಮುಖಂಡರು ಉಲ್ಲೇಖಿಸಿದ ಉಪನ್ಯಾಸಕರಿಂದ ಅರಸು ಕುರಿತು ಉಪನ್ಯಾಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.
ಎರಡೂ ಜಯಂತಿಗಳು ಒಂದೇ ದಿನ ಇರುವ ಕಾರಣ ಒಂದೇ ವೇದಿಕೆಯಲ್ಲಿ ಎರಡು ಜಯಂತಿಗಳನ್ನು ಆಚರಿಸಬಹುದು ಎಂದು ಸಲಹೆ ನೀಡಿದರು.

2023-24 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ನಿಯಲಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ಹಾಗೂ ಹಿಂದುಳಿದ ವರ್ಗಗಳ ಏಳ್ಗೆಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವಂತೆ ಮನವಿ ಮಾಡಿದರು.
ಅರ್ಧಕ್ಕೆ ನಿಂತಿರುವ ಡಿ.ದೇವರಾಜ ಅರಸು ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ತರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಸುರವರ ಕುರಿತಾದ ಕಿರು ಪುಸ್ತಕಗಳನ್ನು ವಿತರಿಸುವಂತೆ ಮನವಿ ಮಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ ಮಾತನಾಡಿದರು.. ಜಿಲ್ಲಾಧಿಕಾರಿಗಳು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಹಿಂದುಳಿದ ವರ್ಗಗಳಿಗಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುವುದು.

D. Devaraja Arasu ಸಭೆಯಲ್ಲಿ ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರಾದ ಬಿ.ರಾಜು, ಶ್ರೀಧರ್, ಎಸ್ ಪಿ ಶೇಷಾದ್ರಿ, ರಾಜ್‌ಕುಮಾರ್, ವೆಂಕಟೇಶ್, ಏಳುಕೋಟಿ, ಮೂರ್ತಿ, ಷಣ್ಮುಗಂ, ರವಿಕುಮಾರ್, ವಿಜಯಕುಮಾರ್, ಮಹಾಲಿಂಗಪ್ಪ, ಲೋಕೇಶ್, ಹನುಮಂತಪ್ಪ, ಚನ್ನವೀರಪ್ಪ, ಪ್ರಕಾಶ್ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...