Sunday, June 22, 2025
Sunday, June 22, 2025

Adichunchanagiri ಆಗಸ್ಟ್ 11 ರಿಂದ 14 ವರೆಗೆ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ

Date:

Adichunchanagiri ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ವತಿಯಿಂದ ಆಗಸ್ಟ್ 11 ರಿಂದ 14 ರ ವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮವನ್ನು ಏರ್ಪಡಿಸಲಾಗಿದೆ.
ಸಹ್ಯಾದ್ರಿ ತಪ್ಪಲಿನ ಮಲೆನಾಡಿನ ಮಡಿಲಲ್ಲಿ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ವಿಶೇಷ ಹೆಸರಿನಿಂದ ಕಂಗೊಳಿಸುತ್ತಿರುವ ವಿದ್ಯಾ ಸಂಸ್ಥೆಯೇ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ.
ಯುವ ಜನಾಂಗದಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಯೋಗ್ಯ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಅವರ ಬದುಕನ್ನು ರೂಪಿಸುವ ಪ್ರಯತ್ನಕ್ಕಾಗಿ ಶಿವಮೊಗ್ಗ ನಗರದಲ್ಲಿರುವ ಶ್ರೀಆದಿಚುಂಚನಗಿರಿ ಶಾಖಾ ಮಠದ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಅನೇಕ ಸಂಸ್ಥೆಗಳ ಕ್ರೀಡಾ ತಜ್ಞರ ಮತ್ತು ತರಬೇತುದಾರರ ಒಂದು ತಂಡ ಅಸ್ತಿತ್ವಕ್ಕೆ ಬಂದಿರುವುದರಿಂದ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ.
ವಿದ್ಯಾಸಂಸ್ಥೆಯಿಂದ ಕ್ರೀಡೆಯಲ್ಲಿ ಉತ್ತಮ ತರಬೇತಿಯನ್ನು ನೀಡಿ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಮೆರೆಯುವಂತೆ ಮಾಡಿದೆ.
ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ,ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತಿದ್ದೇವೆ. ಇದರಂತೆ ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಶಿವಮೊಗ್ಗ ಮತ್ತು ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ “ಸಿ. ಎಸ್. ಐ. ಕಪ್ ” 1996 ವಾಲಿಬಾಲ್ ಪಂದ್ಯಾವಳಿಯನ್ನು ಆರಂಭಿಸಲಾಯಿತು.
ಪೂಜ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಪಂದ್ಯಾವಳಿಗೆ 2000 ಇಸ್ವಿಯಲ್ಲಿ Adichunchanagiri “ಚುಂಚಾದ್ರಿ ಕಪ್ “ಎಂಬ ನೂತನ ಅಭೀದಾನ ಮಾಡಲಾಯಿತು.
77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ 22ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು , ಈ ಕ್ರೀಡಾಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು.
ಈ ಪಂದ್ಯಾವಳಿಯಲ್ಲಿ ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕರ ಸುಮಾರು 55 ತಂಡಗಳು, ಬಾಲಕಿಯರ 30 ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡುತ್ತಿವೆ. ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ “ಬೆಸ್ಟ್ ಅಟ್ಯಾಕರ್,ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ ” ಸೆಂಟರ್ ಬ್ಲಾಕರ್ ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾರಿತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಈ ಬಾರಿ ಬಾಲಕಿಯರ ವಿಭಾಗದಲ್ಲಿ 30 ಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುತ್ತಿರುವುದರಿಂದ ಈ ಬಾರಿಯೂ ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ನಗದು ಬಹುಮಾನ ಕೊಡುತ್ತಿರುವುದು ಮತ್ತೊಂದು ವಿಶೇಷ.
ಈ ಪಂದ್ಯಾವಳಿಯು ಆರಂಭವಾದಾಗಿನಿಂದ ಪ್ರತಿವರ್ಷವೂ ಶಿವಮೊಗ್ಗ ಜಿಲ್ಲೆಯ 20 ರಿಂದ 25 ವಾಲಿಬಾಲ್ ಕ್ರೀಡಾಪಟು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿ ಶಿವಮೊಗ್ಗ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಮಹಾಪೋಷಕರು ಹಾಗೂ ಕ್ರೀಡಾ ಪ್ರೇಮಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮಿಜಿಯವರು ಪ್ರತಿ ವರ್ಷ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರೊಂದಿಗೆ ಜಿಲ್ಲಾ ವಾಲಿಬಾಲ್ ಸಂಸ್ಥೆಯು ಸಹ ಕೈಜೋಡಿಸಿದೆ.
ಈ ವರ್ಷ ಪಂದ್ಯಾವಳಿಯು ದಿನಾಂಕ:11-08-2024 ರಿಂದ 14-08-2024 ರ ವರೆಗೆ ನಡೆಯಲಿದ್ದು, ಆಟಗಾರರ ಅನುಕೂಲಕ್ಕಾಗಿ ಈಗಾಗಲೇ 4 ಅಂಕಣಗಳನ್ನು ಸಿದ್ಧಪಡಿಸಲಾಗಿದೆ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಾಲಿಬಾಲ್ ಪಂದ್ಯಾವಳಿಯು ನಡೆಸಲಾಗುವುದು. ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ ಹಾಗೂ ಊಟದ ವ್ಯವಸ್ಥೆಯನ್ನೂ,ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷನೂ ಸಹ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲೆಯ 17 ವರ್ಷದ ವಯೋಮಿತಿ ಯೊಳಗಿನ ಕ್ರೀಡಾಪಟುಗಳನ್ನೊಳಗೊಂಡ ಪ್ರೌಢಶಾಲಾ ತಂಡಗಳು ಭಾಗವಹಿಸಬಹುದಾಗಿದೆ.

ನಿಬಂಧನೆಗಳು :1) ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.
2) ವಯೋಮಿತಿ 17 ವರ್ಷ ಮೀರಿರಬಾರದು. (01-01-2008 ರ ನಂತರ ಜನಿಸಿರಬೇಕು.)
3) ಕಡ್ಡಾಯವಾಗಿ 18 ಕಾಲಂ ಇರುವ ಗುರುತಿನ ಚೀಟಿ ತರಬೇಕು. (ಇತ್ತೀಚಿನ ಭಾವಚಿತ್ರದೊಂದಿಗೆ ) ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರವನ್ನು ದೈಹಿಕ ಶಿಕ್ಷಣ ಶಿಕ್ಷಕರು ತರತಕ್ಕದ್ದು.
4) ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮತ್ತು ಶಾಲೆಯ ಡೈಸ್ ಕೋಡ್ ಕಡ್ಡಾಯವಾಗಿರುತ್ತದೆ.
5) ವಿದ್ಯಾರ್ಥಿಯ ಎಸ್‌ಟಿಎಸ್ ಸಂಖ್ಯೆ ಕಡ್ಡಾಯವಾಗಿರುತ್ತದೆ.
ಈ ವಿಷಯವನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಈ ಪಂದ್ಯಾವಳಿಯು ಯಶಸ್ವಿಯಾಗಲು ಸಹಕರಿಸಬೇಕಾಗಿ ವಿನಂತಿ. ಹಿಂದಿನಿಂದಲೂ ತಾವುಗಳು ನೀಡಿದ ಸಹಕಾರಗಳಿಗೆ ಪಂದ್ಯಾವಳಿಯ ಸಂಘಟನಾ ಸಮಿತಿಯು ತಮಗೆ ಧನ್ಯವಾದಗಳು ಸಲ್ಲಿಸುತ್ತದೆ.


ನಗದು ಬಹುಮಾನ :-ಬಾಲಕರ ವಿಭಾಗ: ಪ್ರಥಮ ಸ್ಥಾನ — 5000 ರೂ, ದ್ವಿತೀಯ ಸ್ಥಾನ 4000 ರೂ, ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಬಾಲಕಿಯರ ವಿಭಾಗ: ಪ್ರಥಮ ಸ್ಥಾನ ಪಡೆದ ತಂಡಕ್ಕೆ 5000 ರೂ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 4000 ರೂ , ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.


ಕ್ರೀಡೆ ನಡೆಸುವ ಉದ್ದೇಶ, : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಬೆಳಕಿಗೆ ತರುವುದು. ಈಗ ಸುಮಾರು ಬಾಲಕ ಬಾಲಕಿಯರು ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದೇ ಇದಕ್ಕೆ ಸಾಕ್ಷಿ. ಈಗಲೂ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಚುಂಚಾದ್ರಿ ಕಪ್ ವಾಲಿಬಾಲ್ ನಿಂದ ಉತ್ತೇಜಿತರಾಗಿ ದೇಶದ ವಿವಿಧ ಕಂಪನಿಗಳಲ್ಲಿ ಸೇವೆ ಸಲ್ಲಿಸುವಂತಹ ಅವಕಾಶ ಪಡೆದುಕೊಂಡಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಜಿ ಕಾಮತ್ , ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಶಶಿ ಕೆ ಎಸ್, ನಿರ್ದೇಶಕರಾದ ವಾಸಪ್ಪ ಕೊಳಿಗೆ , ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಮ್, ಗುರುಪುರದ ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಸುರೇಶ ಎಸ್. ಹೆಚ್.ಮುಖ್ಯ ಶಿಕ್ಷಕರಾದ ರಮೇಶ್, ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿಯಾದ ಉದಯ್ಇನ್ನೂ ಮುಂತಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...