Vishwa Hindu Parishad ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಭಾರತ ಸರ್ಕಾರವನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿಹಿಂಪ ಜಿಲ್ಲಾಧ್ಯಕ್ಷ ಜೆ ಆರ್ ವಾಸುದೇವ, ಭೀಕರ ಪರಿಸ್ಥಿತಿಯ
ಲಾಭವನ್ನು ಪಡೆದುಕೊಂಡು, ಗಡಿಯಾಚೆಯಿಂದ ಭಾರತಕ್ಕೆ ಒಳನುಸುಳುವಿಕೆ ಪ್ರಯತ್ನವನ್ನು ಮಾಡಬಹುದು. ಇದನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಿ ಭದ್ರತಾ ಪಡೆಗಳ ಮೂಲಕ ಭಾರತ ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ರೀತಿಯ ಅತಿಕ್ರಮಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
Vishwa Hindu Parishad ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ಬಾಂಗ್ಲಾದ ಹೊಸ ಸರ್ಕಾರ ಅಲ್ಲಿನ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡಬೇಕು ಹಾಗೂ ದಾಳಿಯಿಂದ ನಾಶಗೊಂಡಿರುವ ಹಿಂದೂ ಮನೆಗಳು ಹಾಗೂ ದೇವಾಲಯಗಳನ್ನು ಪುನರ್ ನಿರ್ಮಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸರಕಾರ ಸಹಿತ ವಿಶ್ವ ಸಮುದಾಯ ಬಾಂಗ್ಲಾದೇಶದ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ವಿಶ್ವ ಹಿಂದೂ ಪರಿಷದ್
ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ.
ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಗೃಹ ಸಚಿವರು ವ್ಯಕ್ತಪಡಿಸಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಕೂಡ ತುರ್ತು ಸಹಾಯವಾಣಿ ಸ್ಥಾಪಿಸಲು ನಿರ್ಧರಿಸಿದೆ. ಅದರ ಸಂಖ್ಯೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.