Independence Day ಶಿವಮೊಗ್ಗ ನಗರ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಹಾಗೂ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಮಾರು ನೂರು ಎಕರೆ ವಿಸ್ತೀರ್ಣದಲ್ಲಿ ಆಹಾರ ಸಂಸ್ಕರಣ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಆಡಳಿತರೂಢ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಘೋಷಣೆಯಂತೆ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಪರಿಷ್ಕರಣೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿಶೇಷ ಗಮನಹರಿಸಿತ್ತು. ಪ್ರಶಸ್ತ ಸಾಲಿನಿಂದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಜಿಲ್ಲೆಯ ತುರ್ತು ಅಗತ್ಯ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಗಮನಹರಿಸಲಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳು ಜನರ ನೆಮ್ಮದಿಯ ಬದುಕಿಗೆ ಆಸರೆಯಾಗಿವೆ ಅವುಗಳು ದುರ್ಬಳಕೆಯಾಗದಂತೆ ಜನರು ಗಮನಹರಿಸಬೇಕು ಎಂದವರು ನುಡಿದರು.
ಪ್ರಸಕ್ತ ಸಾಲಿನ ಮುಂಗಾರಿನಿಂದಾಗಿ ಎಲ್ಲಾ ಜಲಾಶಯಗಳು, ಕೆರೆ-ಕಟ್ಟೆ- ಕಾಲುವೆಗಳು ತುಂಬಿ ತುಳುಕುತ್ತಿ ವೆ. ಕೃಷಿ ಚಟುವಟಿಕೆಗಳು ಎಂದಿನಂತೆ ಸಾಗಿವೆ ರೈತರಲ್ಲಿ ಸಹಜವಾಗಿ ಮಂದಹಾಸ ಮೂಡಿದೆ ಎಂದು ಅವರು ರಾಜ್ಯದ ಎಲ್ಲಾ ಜಲಾಶಯಗಳ ನಿರ್ವಹಣೆ ಮತ್ತು ದುರಸ್ತಿಗಾಗಿ ಸರ್ಕಾರ ವಿಶೇಷ ಗಮನಹರಿಸಲಿದೆ ಎಂದವರು ನುಡಿದರು.
ಜಿಲ್ಲೆಯ ಬಹು ದಿನಗಳ ಸಮಸ್ಯೆಯಾಗಿರುವ ಶರಾವತಿ ಸಂತ್ರಸ್ಥರು, ಬಗರ್ ಹುಕುಂ ಸಾಗುವಳಿದಾರರುಹಾಗೂ ಚಕ್ರ ವರಾಹಿ ಸಾವೇಹಕ್ಲು ಸೇರಿದಂತೆ ಸರ್ಕಾರದ ವಿವಿಧ ನೀರಾವರಿ ಯೋಜನೆಗಳಿಗಾಗಿ ಮನೆ ಆಸ್ತಿ ಎಲ್ಲವನ್ನು ಕಳೆದುಕೊಂಡವರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಸರ್ಕಾರ ವಿಶೇಷ ನಡವಳಿಯನ್ನು ಅನುಮೋದಿಸಿದೆ ಅಲ್ಲದೆ ಅರಣ್ಯ ವಾಸಿ ಗಳಾಗಿ ಬದುಕು ಕಟ್ಟಿಕೊಂಡಿರುವವರ ಹಿತ ರಕ್ಷಣೆಗೆ ಹಾಗೂ ಅವರನ್ನು ಒಕ್ಕಲಿಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. 2015
ರ ನಂತರ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ರಕ್ಷಣೆ ಮಾಡದು ಸಾಧ್ಯವಾಗದು ಎಂದ ಅವರು ಈ ಸಂಬಂಧ ಸುಪ್ರೀಂಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ಸಲಹೆಯಂತೆ ಕಾರ್ಯನಿರ್ವಹಣೆ ನಡೆಯಲಿದೆ ಎಂದರು.
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಹಾಗೂ ನ್ಯೂನ್ಯತೆಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲಾಮಟ್ಟದಲ್ಲಿ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ಒಂದು ಅಂದಾಜಿನ ಪ್ರಕಾರ ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 9 ಕೋಟಿ ರೂಗಳ ವಾರ್ಷಿಕ ಅನುದಾನ ವ್ಯಯ ಮಾಡಲಾಗುತ್ತಿದೆ ಎಂದರು
ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಸೆಪ್ಟೆಂಬರ್ 5 ರಿಂದ ರಾಜ್ಯರಾದ್ಯಂತ ರಾಜ್ಯದ 56 ಲಕ್ಷ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಮೊಟ್ಟೆ ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲು ಕ್ರಮವಹಿಸಲಾಗಿದೆ ಅದಕ್ಕಾಗಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನಿಂದ ಸುಮಾರು 1500 ಕೋಟಿ ರೂಪಾಯಿಗಳ ಆರ್ಥಿಕ ನೆರವು ದೊರೆಯಲಿದೆ ಎಂದರು.
Independence Day ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಓದಿದ್ದು, ಪ್ರಸ್ತುತ ಸಂದರ್ಭದಲ್ಲಿ ಉನ್ನತ ಸ್ಥಾನದಲ್ಲಿದ್ದು ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳು ಹಾಗೂ ಗಣ್ಯರು ತಾವು ಓದಿದ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವ ಮೂಲಕ ಶಾಲೆಯ ಸರ್ವ ಸರ್ವಾಂಗಿನ ವಿಕಾಸಕ್ಕೆ ಸಹಕರಿಸುವಂತೆ ಸಚಿವರು ಮನವಿ ಮಾಡಿದರು.
ರಾಜ್ಯದಲಿನ ಸರ್ಕಾರಿ ಶಾಲೆಗಳಲ್ಲಿನ ಕೊರತೆ ಇರುವ ಶಿಕ್ಷಕರ ಬರ್ತಿಗೆ ಕ್ರಮ ವಹಿಸಲಾಗಿದ್ದು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಕ್ಕೂ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಮಕ್ಕಳ ಪಠ್ಯಪುಸ್ತಕ ಹೊರೆಯನ್ನು ಕಡಿಮೆ ಮಾಡಲು, ಎಸ್ ಎಸ್ ಎಲ್ ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಸಲಾಗುತ್ತಿದೆ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸದ ಜೊತೆಗೆ ಸರ್ಕಾರಿ ಶಾಲೆಗೆ ಹೆಚ್ಚಿನ ಮಕ್ಕಳು ದಾಖಲಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗುವಂತೆ ಹಾಗೂ ತಮ್ಮ ಮಕ್ಕಳನ್ನು ಸತ್ ಪ್ರಜೆಗಳಾಗಿ ರೂಪಿಸುವಂತೆ
ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ರಾಜ್ಯದ ಸುಮಾರು 25 ಸಾವಿರ ಮಕ್ಕಳಿಗೆ ನೀಟ್ ಮತ್ತಿತರ ಪರೀಕ್ಷೆಗಳಿಗೆ ಸಹಕಾರಿಯಾಗುವಂತೆ ಶಿಕ್ಷಣ ತರಬೇತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಉದ್ದೇಶಿಸಲಾಗಿದೆ ರಾಜ್ಯದಾದ್ಯಂತ ಸಾವಿರದ 800 ಎಲ್ ಕೆ ಜಿ ಯು ಕೆ ಜಿ ತರಗತಿಗಳನ್ನು ಆರಂಭಿಸಿ 36,000 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಾಗಿದೆ. 1700 ಕನ್ನಡ ಮತ್ತು ಆಂಗ್ಲ ಮಧ್ಯಮದ ಶಾಲೆಗಳನ್ನು ತೆರೆಯಲಾಗಿದೆ
ಎಂದರು.
ಪ್ರಸ್ತುತ ಜೋಗದಲ್ಲಿ 1700 ಮೆಗಾ ವ್ಯಾಟ್ ವಿದ್ಯುತ್ ಉತ್ಪನ್ನ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪನ್ನ ಮಾಡಲು ಅಗತ್ಯ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಹೇಮಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿತಲ್ ಕುಮಾರ್, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ ಬಾನು, ಜಿಲ್ಲಾ ಗ್ಯಾರೆಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರ ಭೂಪಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.