Thursday, March 19, 2026
Thursday, March 19, 2026

Chamber Of Commerce ಭಾರತ ಸ್ವಾವಲಂಬಿ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ- ಎನ್.ಗೋಪಿನಾಥ್

Date:

Chamber Of Commerce ದೇಶ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಭಾರತ ಸ್ವಾವಲಂಬಿಯಾಗಿ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ಭಾರತ ದೇಶವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಯು ದೇಶಕ್ಕಾಗಿ ಕೆಲಸ ಮಾಡಬೇಕು. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಜತೆಯಲ್ಲಿ ದೇಶದ ಅಭಿವೃದ್ಧಿಯಲ್ಲೂ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಸ್ವಾತಂತ್ರ್ಯ ಒಂದು ದಿನಕ್ಕೆ ಸೀಮಿತವಾಗದೇ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಆಂತರಿಕ, ಬಾಹ್ಯ ಬೆದರಿಕೆಗಳಿಗೆ ಜಗ್ಗದೇ ಬದ್ಧತೆಯಿಂದ ಕೆಲಸ ಮಾಡುವ ಗುರಿ ಹೊಂದಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಸಂಕಲ್ಪ ಮಾಡಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡೋಣ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಉದ್ದಿಮೆದಾರರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಆಡಳಿತ ಮಂಡಳಿಯು ಸಂಘಟಿತ ಕೆಲಸವನ್ನು ಎಲ್ಲರೊಟ್ಟಿಗೆ ಸೇರಿ ಪ್ರಾಮಾಣಿಕವಾಗಿ ಬದ್ಧತೆಯಿಂದ ಮಾಡುತ್ತಿದೆ. ಎಲ್ಲ ರೀತಿ ಅಭಿವೃದ್ಧಿ ಮಾಡಲಾಗುವುದು ಎಂದರು.
Chamber Of Commerce ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಆರಂಭಿಸಿರುವ ಅಡ್ವಾನ್ಸ್ಡ್‌ ಅಕಾಡೆಮಿ ಕೌಶಲ್ಯಯುತ ಯುವ ಸಮೂಹ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ನುರಿತ ನೌಕರರ ಪಡೆ ಸಿದ್ಧವಾಗಬೇಕು. ಹೊಸ ಕೈಗಾರಿಕೆಗೆ ಅವಶ್ಯವಿರುವ ಪೂರಕ ವಾತಾವರಣ ನಿರ್ಮಿಸಲು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ, ಡಿ.ಎಂ.ಶಂಕರಪ್ಪ, ಕೆ.ವಿ.ವಸಂತಕುಮಾರ್, ಮಂಜೇಗೌಡ, ಸುರೇಶ್, ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್, ಮಧುಸೂದನ್ ಐತಾಳ್, ನಟರಾಜ್, ಎಂ.ರಾಜು, ಉದಯಕುಮಾರ್, ರಂಗಪ್ಪ ಶಾಸ್ತ್ರಿ, ಪ್ರದೀಪ್ ವಿ.ಎಲಿ, ಎ.ಎಂ.ಸುರೇಶ್, ಪ್ರಶಾಂತ್ ಶಾಸ್ತ್ರಿ, ಚಂಪಾಲಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...