Friday, December 5, 2025
Friday, December 5, 2025

Kolkata Doctor Rape ಕೊಲ್ಲೊತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಟನೆ ಗಳಿಂದ ಪ್ರತಿಭಟನೆ

Date:

Kolkata Doctor Rape Case ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಮತ್ತು ನಂತರ ಪ್ರತಿಭಟನಾನಿರತ ವೈದ್ಯ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇಂದು ಐಎಂಎ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಶನಿವಾರ ನಗರದಲ್ಲಿ ವೈದ್ಯರ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸಿಮ್ಸ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ಗೋಪಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿ ಮನವಿ ಸಲ್ಲಿಸಿದರು.
ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರದ ಹಿನ್ನಲೆಯಲ್ಲಿ ನಗರದಲ್ಲಿ ವೈದ್ಯರು ಒಪಿಡಿ ಬಂದ್ ಮಾಡಿದ್ದರು. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತಾಗಿ ಬೇರೆ ಸೇವೆ ಇಲ್ಲದ ಕಾರಣ ರೋಗಿಗಳಿಗೆ ತೊಂದರೆಯಾಗಿತ್ತು.
Kolkata Doctor Rape Case ವಿಧಾನ ಪರಿಷತ್ ಸದಸ್ಯ ಡಾ|| ಧನಂಜಯ ಸರ್ಜಿ ಮಾತನಾಡಿ, ವೈದ್ಯರಿಗೆ ಮತ್ತು ವೈದ್ಯ ವಿದ್ಯಾರ್ಥಿಗಳು ದಿನದ ೨೪ ಗಂಟೆಯೂ ತುರ್ತು ಸೇವೆ ಮಾಡಬೇಕಿರುತ್ತದೆ. ಆದರೆ, ವೈದ್ಯರಿಗೆ ಇತ್ತೀಚಿನದ ದಿನಗಳಲ್ಲಿ ರಕ್ಷಣೆ ಇಲ್ಲದಂತಾಗಿದೆ. ಮಹಿಳಾ ವೈದ್ಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಇಂತಹ ಘಟನೆಗಳು ಸಂಭವಿಸಿದ ತಕ್ಷಣ ’ವೈದೋ ನಾರಾಯಣೋ ಹರಿ’ ಎಂದು ಹೇಳುತ್ತಾರೆ. ಆದರೆ, ವೈದ್ಯರ ಮೇಲೆಯೇ ಹಲ್ಲೆ ನಡೆಯುತ್ತಿದೆ. ಇದನ್ನು ಸರ್ಕಾರಗಳು ತಪ್ಪಿಸಬೇಕು. ಮಹಿಳಾ ವೈದ್ಯರಿಗೆ ಸೂಕ್ತರ ರಕ್ಷಣೆ ನೀಡಬೇಕು. ಕೂಡಲೇ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಬೇಕು. ಮುಚ್ಚಿಡಲು ಪ್ರಯತ್ನ ಕೂಡ ನಡೆಯುತ್ತಿದೆ. ಕೂಡಲೇ ಇಂತಹ ಪ್ರಕರಣಗಳು ಸಂಭವಿಸಿದಾಗ ಸರ್ಕಾರ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು. ಕಾಲಹರಣ ಮಾಡದೇ ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
೨೦೨೦ರ ವೈದ್ಯಕೀಯ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು. ನೊಂದ ಕುಟುಂಬಕ್ಕೆ ಎಲ್ಲಾ ರೀತಿಯ ನೆರವಿನ ಜೊತೆಗೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಡಾ|| ಶ್ರೀಧರ್, ಡಾ|| ಸುರೇಶ್, ಡಾ|| ಸತೀಶ್‌ಕುಮಾರ್, ಡಾ|| ಸಂಜಯ್, ಡಾ|| ಹೇಮಂತ್, ಡಾ|| ರಮ್ಯಾ, ಡಾ|| ಜಿತೇಂದ್ರಕುಮಾರ್, ಡಾ|| ಶ್ರೀಕಾಂತ್ ಶೆಟ್ಟಿ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು, ಗೃಹ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...