Thursday, June 18, 2026
Thursday, June 18, 2026

Uttarakhand Police ಡೆಹ್ರಾಡೂನಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಐವರ ದಸ್ತಗಿರಿ

Date:

Uttarakhand Police ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಬಸ್ ಚಾಲಕರು ಸೇರಿದಂತೆ ಐವರನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ.

ಡೆಹ್ರಾಡೂನ್‌ನ ಐಎಸ್‌ಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ.
ಮಕ್ಕಳ ಕಲ್ಯಾಣ ಸಮಿತಿ ತಂಡ ಅಪ್ರಾಪ್ತ ಬಾಲಕಿಯನ್ನು ಬಸ್ ನಿಲ್ದಾಣದಿಂದ ರಕ್ಷಿಸಿದ್ದು, ಘಟನೆಯನ್ನು ಬಯಲಿಗೆಳೆದಿದೆ.

“ಬಸ್ ಸಿಬ್ಬಂದಿ ಅಪ್ರಾಪ್ತ ಬಾಲಕಿಯನ್ನು ದೆಹಲಿಯಿಂದ ಡೆಹ್ರಾಡೂನ್‌ಗೆ ಕರೆತಂದಿದ್ದರು. ಇಬ್ಬರು ಬಸ್ ಚಾಲಕರು, ಕಂಡಕ್ಟರ್, ಕ್ಯಾಷಿಯರ್ ಮತ್ತು ಸ್ವೀಪರ್ ಸೇರಿದಂತೆ ಐವರು ಅದೇ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ
ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

Uttarakhand Police ಈ ಸಂಬಂಧ ಮಕ್ಕಳ ಕಲ್ಯಾಣ ಸಮಿತಿಯು ಶನಿವಾರ ಐಎಸ್‌ಬಿಟಿ ಪೊಲೀಸ್ ಹೊರಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ಕ್ಷಿಪ್ರ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸತತ ಮೂರು ಸಲ ಸಮಾಲೋಚನೆ ನಡೆಸಿದ ಬಳಿಕ ಬಾಲಕಿ ಉತ್ತರ ಪ್ರದೇಶದ ಮೊರಾದಾಬಾದ್ ಮೂಲದವಳು ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೊರಾದಾಬಾದ್‌ನ 16 . ಬಾಲಕಿ ಮೇಲೆ ಆಗಸ್ಟ್ 13 ರ ಸಂಜೆ ಡೆಹ್ರಾಡೂನ್ ISBT ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು.

ಬಾಲಕಿ ಪಂಜಾಬ್‌ನಿಂದ ದೆಹಲಿಗೆ ಮತ್ತು ನಂತರ ಡೆಹ್ರಾಡೂನ್‌ಗೆ ಪ್ರಯಾಣ ಬೆಳೆಸಿದ್ದಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...