Friday, September 27, 2024
Friday, September 27, 2024

Rotary Club Shivamogga ಶಾಲಾಮಕ್ಕಳಿಗೆ ಪೋಕ್ಸೋ‌ ಕಾಯಿದೆ ಅರಿವು ಅತ್ಯವಶ್ಯ-ಬಸವರಾಜ್

Date:

Rotary Club Shivamogga ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಪೋಷಕರಿಗೆ ಲೈಂಗಿಕ ದೌರ್ಜನ್ಯದಿಂದ ಸಂರಕ್ಷಣೆ ಪಡೆಯುವ ಕಾಯಿದೆ ೨೦೧೨ (ಪೋಕ್ಸೋ) ಹಾಗೂ ಬಾಲ್ಯ ವಿವಾಹ ನಿಷೇದ ಕಾಯಿದೆ ೨೦೦೬ ಇವುಗಳ ಕುರಿತು ಅರಿವು ಮೂಡಿಸುವುದು ಶಾಲಾ ಆಡಳಿತ ಮಂಡಳಿಗಳ ಹಾಗೂ ಶಿಕ್ಷಕರ ಜವಾಬ್ದಾರಿಯೆಂದು ನಗರದ ಪ್ರಸಿದ್ಧ ವಕೀಲರು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಆದ ಶ್ರೀ ಬಸವರಾಜ್ ಅವರು ಅಭಿಪ್ರಾಯ ಪಟ್ಟರು.
ಅವರು ಇಂದು ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕಾಯಿದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಶ್ರೀಯುತರು ತಮ್ಮ ಮಾತನ್ನು ಮುಂದುವರೆಸಿ ಮಕ್ಕಳಿಗೆ ಅದರಲ್ಲೂ ಹದಿಹರೆಯದ ಮಕ್ಕಳಿಗೆ ಮತ್ತು ಪೋಷಕರಿಗೆ ತಮ್ಮ ಬಂಧುಗಳು ಅಥವಾ ಶಿಕ್ಷಕರು ತಮ್ಮ ಮೈಯನ್ನು ಮುಟ್ಟುವಾಗ ಬ್ಯಾಡ್ ಟಚ್ ಮತ್ತು ಗುಡ್ ಟಚ್ ಮೂಲಕ ಮುಟ್ಟುತ್ತಾರೆಯೇ ಎಂಬುದರ ವ್ಯತ್ಯಾಸವನ್ನು ತಿಳಿದುಕೊಂಡಿರುವುದು ಬಹಳ ಮುಖ್ಯ. ತಮ್ಮ ತಂದೆ-ತಾಯಿ ಅಥವಾ ಸ್ವಂತ ಸಹೋದರ ಸಹೋದರಿಯರ ಹೊರತಾಗಿ ಇತರರ ಜೊತೆಗೆ ವ್ಯವಹರಿಸುವಾಗ ಈ ಪರಿಜ್ಞಾನವನ್ನು ಹೊಂದಿರಬೇಕೆAದು ತಿಳಿಸಿದರು. ಈ ಬಗ್ಗೆ ಸೂಕ್ತ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪ್ರದರ್ಶಿಸುವುದರ ಮೂಲಕ ಮಕ್ಕಳಿಗೆ ಹಾಗೂ ಪೋಷಕರಿಗೆ ಈ ಅಂಶಗಳನ್ನು ಮನದಟ್ಟು ಮಾಡಿದರು. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಕಡಿಮೆಯಾಗುತ್ತಿದ್ದರೂ, ಕೆಲವು ಪ್ರದೇಶಗಳ ಹಾಗೂ ಕೆಲವು ತೀರಾ ಹಿಂದುಳಿದ ವರ್ಗಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಜೀವಂತ ಇರುವುದು ಅತ್ಯಂತ ದುರದೃಷ್ಟಕರ ಸಂಗತಿ ಎನ್ನುತ್ತ ಹೆಣ್ಣು ಮಕ್ಕಳು ೧೮ವರ್ಷಕ್ಕಿಂತ ಮುಂಚೆ & ಗಂಡು ಮಕ್ಕಳು ೨೧ ವರ್ಷಕ್ಕಿಂತ ಮುಂಚೆ ವಿವಾಹ ಮಾಡುವುದು ಅವರ ಆರೋಗ್ಯ ಹಾಗೂ ಕಾನೂನು ದೃಷ್ಟಿಯಿಂದ ಸೂಕ್ತವಲ್ಲ ಎಂದು ಕಿವಿ ಮಾತು ಹೇಳಿದರು.
Rotary Club Shivamogga ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಅರುಣ್ ದೀಕ್ಷಿತ್‌ರವರು ದೀಪ ಬೆಳಗಿಸುವುದರ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಟ್ರಸ್ಟ್ನ ಉಪಾಧ್ಯಕ್ಷರಾದ ರೊ. ಡಾ|| ಪರಮೇಶ್ವರ್ ಡಿ. ಶಿಗ್ಗಾಂವ್ ಇವರು ಪೋಕ್ಸೋ ಕಾಯಿದೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮಕ್ಕಳ ಲೈಂಗಿಕ ಶೋಷಣೆಯನ್ನು ತಡೆಗಟ್ಟಲು ಅವರಿಗೆ ಈ ಕಾಯಿದೆಯ ಅರಿವಿನ ಮಹತ್ವ ಎಷ್ಟರ ಮಟ್ಟಿಗೆ ಅವಶ್ಯಕ ಎಂಬುದನ್ನು ತಿಳಿಸುತ್ತಾ, ಶಾಲೆಯಲ್ಲಿ ಈ ಸಂಬಂಧದ ದೂರುಗಳನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,)ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ನಿವೃತ್ತ ಡಿ.ಪಿ.ಐ. ಆದ ಶ್ರೀ ಚಂದ್ರಶೇಖರಯ್ಯ ಎಂ., ಇವರು ತಾವು ಶಿಕ್ಷಣ ಇಲಾಖೆಯ ವಿವಿಧ ಹಂತದಲ್ಲಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿವರಿಸುತ್ತಾ, ಮಕ್ಕಳು ಈ ಬಗ್ಗೆ ಎಚ್ಚರದಿಂದ ಇರುವುದು ಅವರ ಉಜ್ವಲ ಭವಿಷ್ಯದ ದೃಷ್ಟಿಯಿಂದ ಅತೀ ಅವಶ್ಯಕ ಎಂದರು. ಹಾಗೆಯೇ ಶಿಕ್ಷಕರು ಈ ಸಂಬAಧ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಟ್ರಸ್ಟ್ನ ಖಜಾಂಚಿ ರೊ. ಜಿ. ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲರಾದ ಸೂರ್ಯನಾರಾಯಣನ್ ಆರ್., ಇವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...