Sunday, December 14, 2025
Sunday, December 14, 2025

Bear News ಆತಂಕ ಹುಟ್ಟಿಸಿದ್ದ ಜಾಂಬವಂತನ ಸೆರೆ

Date:

Bear News ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.
ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
Bear News ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್‌ ಇರಿಸಿದ್ದರು. ಆರ್‌ಎಫ್‌ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್‌ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...