Sharavati Dam ಕಳೆದ ಕೆಲ ದಿನಗಳಿಂದ, ಮಲೆನಾಡಿನಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶ ಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ, ಲಿಂಗನಮಕ್ಕಿ ಜಲಾಶಯ ಒಳಹರಿವಿನಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ., ಲಿಂಗನಮಕ್ಕಿ ಡ್ಯಾಂ ನಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವೂ ಏರಿಕೆಯಾಗಿದೆ.
Sharavati Dam ಈ ಕಾರಣದಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ಮತ್ತೆ ಮೈದುಂಬಿ ಹರಿಯಲಾರಂಭಿಸಿದೆ. ಜಲಧಾರೆಯ ವೈಭೋಗಕ್ಕೆ ಸಾಕ್ಷಿಯಾಗಿದೆ.
ಮಂಗಳವಾರ ಬೆಳಿಗ್ಗೆಯ ಮಾಹಿತಿಯಂತೆ, ಲಿಂಗನಮಕ್ಕಿ ಡ್ಯಾಂನ ಒಳಹರಿವು 36,564 ಕ್ಯೂಸೆಕ್ ಗೆ ಏರಿಕೆಯಾಗಿದೆ. 25,202 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ . ಡ್ಯಾಂನ ನೀರಿನ ಮಟ್ಟ 1817. 55 (ಗರಿಷ್ಠ ಮಟ್ಟ : 1819) ಅಡಿಯಿದೆ.
ಮೂರ್ನಾಲ್ಕು ದಿನಗಳಿಂದ ಹೊಸನಗರ ತಾಲೂಕಿನ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗಲಾರಂಭಿಸಿದೆ . ಈ ಕಾರಣದಿಂದ ಲಿಂಗನಮಕ್ಕಿ ಡ್ಯಾಂ ಒಳಹರಿವಿನಲ್ಲಿ ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ.