Wednesday, April 30, 2025
Wednesday, April 30, 2025

High Court ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನೀಡಿದ ಜಾಮೀನು ರದ್ದತಿ‌ ಬಗ್ಗೆ ಕೋರಿದ್ದ ಎಸ್ ಐ ಟಿ ಅರ್ಜಿ ವಜಾ

Date:

High Court ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸ್‌ಐಟಿ ವಾದ ಆಲಿಸಿದ ನಂತರ ಆಗಸ್ಟ್ 1 ರಂದು ಆದೇಶ ಕಾಯ್ದಿರಿಸಿತ್ತು. ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಮೇ 13ರಂದು ಜಾಮೀನು ನೀಡಿದೆ.

High Court ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಶಾಸಕ ಹೆಚ್‌.ಡಿ ರೇವಣ್ಣ ಮೇಲಿದೆ. ಸಂತ್ರಸ್ತೆ ಪ್ರಜ್ವಲ್ ರೇವಣ್ಣ ವಿರುದ್ದ ದೂರು ನೀಡದಂತೆ ತಡೆಯಲು ಆಕೆಯನ್ನು ರೇವಣ್ಣ ಅಪಹರಣ ಮಾಡಿಸಿದ್ದರು ಎನ್ನಲಾಗಿದೆ.

ಈ ಸಂಬಂಧ ಮಹಿಳೆಯ ಮಗ ದೂರು ದಾಖಲಿಸಿದ್ದರು. ಎಸ್‌ಐಟಿ ರೇವಣ್ಣ ಅವರನ್ನು ಬಂಧಿಸಿತ್ತು.

ಇತರ ಆರೋಪಿಗಳಿಗೂ ಜಾಮೀನು
ಇದೇ ವೇಳೆ ಅಪಹರಣ ಪ್ರಕರಣದ ಇತರೆ ಆರೋಪಿಗಳಾದ ಹಾಸನದ ಸತೀಶ್‌ ಬಾಬು ಅಲಿಯಾಸ್‌ ಸತೀಶ್‌ ಬಾಬಣ್ಣ, ಹೆಚ್‌ ಕೆ ಸುಜಯ್‌, ಹೆಚ್‌ ಎನ್‌ ಮಧು, ಎಸ್‌ ಟಿ ಕೀರ್ತಿ, ಹೆಚ್‌ ಡಿ ಮಾಯು ಗೌಡ, ಕೆ ಎ ರಾಜಗೋಪಾಲ್‌ ಅವರಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...