Friday, November 22, 2024
Friday, November 22, 2024

Anna Bhagya Yojana ಅನ್ನ ಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಿಲ್ಲ.- ಸರ್ಕಾರದ ಪ್ರಚಾರ ಇಲಾಖೆ ಪ್ರಕಟಣೆ

Date:

Anna Bhagya Yojana ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ ಇದು ಆತಂಕ ಪಡುವ ಸಂಗತಿಯಲ್ಲ.

ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿಯಂತಹ ಕಾಳುಗಳು ಇದ್ದಲ್ಲಿ ಆತಂಕ ಪಡದಿರಿ ಮತ್ತು ಅದನ್ನು ಎಸೆಯದಿರಿ. ಏಕೆಂದರೆ ಅದು ಪ್ಲಾಸ್ಟಿಕ್‌ ಅಕ್ಕಿಯಲ್ಲ, ನಿಮ್ಮ ಆರೋಗ್ಯವನ್ನು ಉತ್ತಮವಾಗಿಸುವ ಪೌಷ್ಠಿಕಾಂಶವುಳ್ಳ ಸಾರವರ್ಧಿತ ಅಕ್ಕಿ.

Anna Bhagya Yojana ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆ.ಜಿ. ಅಕ್ಕಿಗೆ 10 ಗ್ರಾಂ. ನಷ್ಟು ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿಕ್‌ ಆಮ್ಲ ಮತ್ತು ವಿಟಮಿನ್‌ ಬಿ ಯನ್ನು ಒದಗಿಸುತ್ತದೆ.

ಈ ಸಾರವರ್ಧಿತ ಅಕ್ಕಿಯು ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸುತ್ತದೆ ಮತ್ತು ರಕ್ತಹೀನತೆ, ಅಪೌಷ್ಟಿಕತೆಯನ್ನು ಹೋಗಲಾಡಿಸುತ್ತದೆ. ಪ್ರಯೋಗಾಲಯದಿಂದ ಪರೀಕ್ಷೆಗೆ ಒಳಪಟ್ಟ ಸಾರವರ್ಧಿತ ಅಕ್ಕಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಠಿಕಾಂಶಭರಿತವಾದ ಅಕ್ಕಿ ಎಂದು ಪರಿಗಣಿಸಲಾಗಿರುತ್ತದೆ ಎಂದು ರಾಜ್ಯ ಸರ್ಕಾರದ ಪ್ರಚಾರ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...