Monday, April 21, 2025
Monday, April 21, 2025

Sri Abhinava Channabasava ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸಿ- ಶ್ರೀಅಭಿನವ ಚನ್ನಬಸವಶ್ರೀ

Date:

Sri Abhinava Channabasava ಶಿವಮೊಗ್ಗ ದೇಶದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆ ಮಹತ್ವವನ್ನು ಯುವಜನರಿಗೆ ತಿಳಿಸಬೇಕಾದ ಅವಶ್ಯಕತೆ ಇದ್ದು, ಸಂಸ್ಕೃತಿ ಆಚರಣೆಗಳನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದು ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಹೊಸನಗರದ ಮೂಲೆಗದ್ದೆ ಸದಾಶಿವ ಆಶ್ರಮದಲ್ಲಿ ಶಿವಮೊಗ್ಗ ಭಜನಾ ಪರಿಷತ್, ಭಜನಾ ಮಂಡಳಿ, ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಭಕ್ತರಿಂದ ಆಯೋಜಿಸಿದ್ದ ಲಲಿತಾ ಸಹಸ್ರನಾಮ ಮತ್ತು ಶ್ರಾವಣ ವಿಶೇಷ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಭಾರತೀಯ ಮೌಲ್ಯಯುತ ಆಚರಣೆಗಳಿಂದ ಇಂದಿನ ಯುವಪೀಳಿಗೆ ದೂರಾಗುತ್ತಿದ್ದಾರೆ. ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ. ಸನಾತನ ಸಂಸ್ಕೃತಿ ಆಚರಣೆಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ತಿಳಿಸಿದರು.
ಭಾರತ ದೇಶ ವಿಶ್ವದಲ್ಲಿಯೇ ವಿಶೇಷ ಸ್ಥಾನಮಾನ ಹೊಂದಿದ್ದು, ಶ್ರೇಷ್ಠ ಮೌಲ್ಯಯುತ ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿರುವ ಕಾರಣಕ್ಕೆ ಭಾರತ ದೇಶವನ್ನು ವಿಶೇಷ ಗೌರವದಿಂದ ನೋಡುತ್ತಾರೆ. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸಂಗತಿಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದರು.
Sri Abhinava Channabasava ಶ್ರಾವಣ ಮಾಸ ವಿಶೇಷ ತಿಂಗಳು ಆಗಿದ್ದು, ಧಾರ್ಮಿಕ ಆಚರಣೆಗಳಿಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುತ್ತದೆ. ಶ್ರಾವಣ ಮಾಸದಲ್ಲಿನ ಧಾರ್ಮಿಕ ಕಾರ್ಯಗಳು ಸೇರಿದಂತೆ ಮನೆಗಳಲ್ಲಿ ದಿನನಿತ್ಯ ಪಾಲಿಸುವ ಪೂಜೆಯ ಕ್ರಮಗಳನ್ನು ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಲಲಿತ ಸಹಸ್ರನಾಮ ಪಾರಾಯಣದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ್, ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...