Gurudatta Hegde ಶಿವಮೊಗ್ಗ : ಆಗಸ್ಟ್ ೨೯ : (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಲೋಕೋಪಯೋಗಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವ್ಯಾಪ್ತಿಗೊಳಪಡುವ ನಗರ ಮತ್ತು ಗ್ರಾಮೀಣ ರಸ್ತೆಗಳು ಹಾಗೂ ಮಲೆನಾಡಿನ ಆಯ್ದ ಗುಡ್ಡಗಾಡು ಮತ್ತು ಕಡಿದಾದ ತಿರುವುಗಳಿರುವ ಪ್ರದೇಶಗಳಲ್ಲಿ ಆಗಾಗ್ಗೆ ಸಂಭವಿಸುವ ಭೂಕುಸಿತ ಮತ್ತಿತರ ಕಾರಣಗಳಿಂದಾಗಿ ಹಾಳಾಗಿರುವ ಪ್ರಮುಖ ರಸ್ತೆಗಳನ್ನು ದುರಸ್ತಿಗೊಳಿಸಲು ಕ್ರಿಯಾಯೋಜನೆ ತಯಾರಿಸಿ, ಮುಂದಿನ ಒಂದು ವಾರದೊಳಗಾಗಿ ಸಮಗ್ರ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಲ್ಲಿಸುವ ಪ್ರಸ್ತಾವನೆಗಳನ್ನು ತಯಾರಿಸುವ ಪೂರ್ವದಲ್ಲಿ ಆಯಾ ಇಲಾಖೆಗಳ ಅಭಿಯಂತರರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಛಾಯಾಚಿತ್ರಗಳೊಂದಿಗೆ ಕ್ರಿಯಾಯೋಜನೆ ತಯಾರಿಸಿ. ವಿಶೇಷವಾಗಿ ಅಹಿತಕರ ಘಟನೆಗಳು ಸಂಭವಿಸುವ ಸ್ಥಳಗಳು, ಸಂಚಾರ ದಟ್ಟಣೆಯಿಂದ ಅಡಚಣೆಗೊಳಗಾಗುತ್ತಿರುವ ರಸ್ತೆಗಳ ಸಮಸ್ಯೆಯ ಶಾಶ್ವತ ಪರಿಹಾರ ಕೈಗೊಳ್ಳಬಹುದಾದ ಸ್ಥಳಗಳು, ವರ್ತುಲಗಳು, ಕಡಿದಾದ ತಿರುವುಗಳು, ನಿರ್ಮಿಸಲೇ ಬೇಕಾದ ತಡೆಗೋಡೆಗಳು, ಪರ್ಯಾಯ ಮಾರ್ಗಗಳು, ಅಗಲೀಕರಣ ಮುಂತಾದವುಗಳನ್ನು ಪರಿಗಣಿಸುವಂತೆ ಅವರು ಸಲಹೆ ನೀಡಿದ ಅªರು, ಪ್ರಸ್ತಾವನೆ ಸಲ್ಲಿಸುವ ಪೂರ್ವದಲ್ಲಿ ಸಂಬAಧಿಸಿದ ಪೊಲೀಸ್ ಠಾಣಾಧಿಕಾರಿಗಳ ಸಲಹೆ-ಮಾರ್ಗದರ್ಶನ ಪಡೆದುಕೊಳ್ಳುವಂತೆಯೂ ಅವರು ಸಲಹೆ ನೀಡಿದರು.
ಕೊನೆಯ ದಿನಾಂಕದವರೆಗೆ ವಿರಮಿಸದೇ ಕೂಡಲೇ ಸ್ಥಳ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಮುಂದಾಗುವAತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಅಂತಹ ಸಂಭಾವ್ಯ ೩೫೬ಸ್ಥಳಗಳನ್ನು ಗುರುತಿಸಲಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯದಲ್ಲಿ ಭೂಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾಯೋಜನೆಗಳ ಗುಚ್ಚಗಳನ್ನು ಸಿದ್ಧಪಡಿಸುವ, ಕ್ರಿಯಾಯೋಜನೆಯ ಗುಚ್ಚಗಳನ್ನು ಸಿದ್ಧಪಡಿಸುವ ಸಮಯದಲ್ಲಿ ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ ಅವರು ಭೂಕುಸಿತ ಅಧ್ಯಯನ ವರದಿಗಳಲ್ಲಿ ಸೂಚಿಸಿರುವಂತೆ ಮಾರ್ಗಸೂಚಿಗಳನ್ನು ಹಾಗೂ ತಜ್ಞರ ವರದಿ ಮತ್ತು ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅದಕ್ಕನುಗುಣವಾಗಿ ೧೦೦ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆಗೊಳಿಸಲು ಉದ್ದೇಶಿಸಿದೆ. ಆದ್ದರಿಂದ ಸಂಬAಧಿತ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಕ್ರಿಯಾಯೋಜನೆಗಳನ್ನು ತಯಾರಿಸಿ, ಸಲ್ಲಿಸುವಂತೆ ಅವರು ಸೂಚಿಸಿದರು.
Gurudatta Hegde ಇದಕ್ಕೆ ಪೂರಕವಾಗಿ ಸರ್ಕಾರವು ರಾಜ್ಯದ ಕರಾವಳಿ ವiತ್ತು ಮಲೆನಾಡು ಜಿಲ್ಲೆಗಳಲ್ಲಿ ಭೂಕುಸಿತ ತಡೆಗಟ್ಟುವ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲು ಮಾರ್ಗಸೂಚಿ ಹೊರಡಿಸಿದೆ. ಈ ಸಮಿತಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಸೇರಿದಂತೆ ೧೩ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸುವಂತೆ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗದ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂದರು.
ಜಿಲ್ಲಾ ಮಟ್ಟದ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ತುರ್ತು ಕೈಗೊಳ್ಳಬಹುದಾದ ಕಾರ್ಯಗಳ ಕುರಿತು ವಿಶೇಷ ಗಮನಹರಿಸಿ, ಕ್ರಿಯಾಯೋಜನೆ ಸಲ್ಲಿಸಿ, ಜಿಲ್ಲೆಯ ಅಭಿವೃದ್ದಿಗೆ ಹಾಗೂ ಸಂಚಾರಕ್ಕೆ ಅನುಕೂಲವಾಗುವಂತೆ ಕ್ರಿಯಾಯೋಜನೆ ರೂಪಿಸಿ ಸಕಾಲದಲ್ಲಿ ಸಲ್ಲಿಸಬೇಕು. ಅಲ್ಲದೇ ತಮ್ಮ ಮಾತೃ ಇಲಾಖೆಯಿಂದ ಅನುದಾನದ ಲಭ್ಯವಿದ್ದಲ್ಲಿ ಆ ಅನುದಾನವನ್ನು ಬಳಸಿಕೊಂಡು ಕಾರ್ಯಯೋಜನೆ ರೂಪಿಸಲು ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್., ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಎ.ಎಸ್.ಕಾರಿಯಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Gurudatta Hegde ಮಲೆನಾಡಿನಲ್ಲಿನ ಗುಡ್ಡರಸ್ತೆ ಭೂಕುಸಿತದ ಬಗ್ಗೆ ದುರಸ್ತಿಗೊಳಿಸಲು ಕ್ರಿಯಾಯೋಜನೆ ಸಿದ್ಧಪಡಿಸಿ- ಗುರುದತ್ತ ಹೆಗಡೆ
Date: