Wednesday, March 25, 2026
Wednesday, March 25, 2026

Kempegowda International Airport ವಿದೇಶಿ ಉದ್ಯೋಗ ವ್ಯಾಮೋಹ. ಯುವತಿಗೆ ವಂಚಿಸಿದ ಪ್ರಕರಣ

Date:

Kempegowda International Airport ವಿದೇಶದಲ್ಲಿ ಉದ್ಯೋಗದ ನೆಪಹೇಳಿ ಹೆತ್ತವರು, ಗೆಳತಿಯರನ್ನು ಯಾಮಾರಿಸಿ ಸುಳ್ಯದ ಯುವತಿಯೊಬ್ಬಳು ಅನ್ಯಧರ್ಮದ ತನ್ನ ಪ್ರಿಯತಮನೊಂದಿಗೆ ಪರಾರಿಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ಕೊಲ್ಲಮೊಗ್ರದ ಯುವತಿ ಈ ವರ್ಷವಷ್ಟೇ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ್ದಳು ಬಡತನದಲ್ಲಿಯೇ ಇದ್ದ ಕುಟುಂಬಕ್ಕೆ ಮಗಳಿಗೆ ವಿದೇಶದಲ್ಲಿ ಕೆಲಸ ಸಿಕ್ಕ ಸುದ್ದಿಕೇಳಿ ಸಂಭ್ರಮ ಮುಗಿಲು ಮುಟ್ಟಿತ್ತು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ವತಃ ಈಕೆಯನ್ನು ಬಿಟ್ಟು, ಒಳ್ಳೆಯದಾಗಲಿ ಎಂದು ಹರಸಿ ಟಾಟಾ ಹೇಳಿ ಬಂದಿದ್ದಾರೆ.
ಪೋಷಕರು ಮಗಳಿಗೆ ಏನೋ ಒಳ್ಳೆಯದಾಗುತ್ತದೆ ಎಂದುಕೊಂಡು ನೆಮ್ಮದಿಯಿಂದ ಮನೆಗೆ ಹೊರಟಿದ್ದಾರೆ. ಮಗಳನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಮನೆಗೆ ಬಂದ ಕುಟುಂಬದವರು, ತಮ್ಮ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಇದರ ಮಾಹಿತಿಗಳನ್ನೂ ಕೂಡ ಹಂಚಿಕೊಂಡಿದ್ದಾರೆ. ಇನ್ನೇನು ಮಗಳು ವಿದೇಶಕ್ಕೆ ಹೊರಟು ಕಷ್ಟಪರಿಹಾರವಾಗಿ ನೆಮ್ಮದಿಯ ಕನಸು ಕಂಡ ಪೋಷಕರಿಗೆ ದಿಗಿಲು ಬಡಿದಂತಾಗಿದೆ.

Kempegowda International Airport ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇನ್ನೇನು ವಿಮಾನ ಹೊರಟಿರಬಹುದೆಂದು ಕರೆಮಾಡಿದ್ದಾಗ ಆಕೆಯ ಫೋನ್ ರಿಂಗ್ ಆಗಿದೆ. ಫೋನ್ ರಿಂಗ್ ಆಗಿದ್ದರಿಂದ ಮನೆಯವರಿಗೆ ಅನುಮಾನ ಶುರುವಾಗಿದೆ. ಈಗಾಗಲೇ ವಿಮಾನ ಹೊರಟ ಸಮಯವಾಗಿದೆ. ಹಾಗಿದ್ದರೂ ಆಕೆಯ ಮೊಬೈಲ್ ರಿಂಗ್ ಆಗೋದಕ್ಕೆ ಹೇಗೆ ಸಾಧ್ಯ ಎನ್ನುವ ಅನುಮಾನ ಬಂದಿದೆ. ಆ ಬಳಿಕ ಕೆಲ ದಿನಗಳ ಬಳಿಕ ಆಕೆಯನ್ನು ಧರ್ಮಸ್ಥಳ ಬಸ್ಸಿನಲ್ಲಿ ನೋಡಿರುವುದಾಗಿ ಕೆಲವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಒಳಹೊಕ್ಕು ಹೈ ಡ್ರಾಮಾ ಮಾಡಿದ್ದ ಪುತ್ರಿ ಆ ಬಳಿಕ ಅಲ್ಲಿಂದ ಅನ್ಯಕೋಮಿನ ಯುವಕನ ಜೊತೆಗೆ ಕಾಣೆ ಆಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪೋಷಕರು ಬಂದರೆ, ಅವರನ್ನು ಬೆಂಗಳೂರಿನಲ್ಲೇ ದೂರು ನೀಡಬೇಕೆಂದು ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ಹಿಂದೂ ಸಂಘಟನೆಗಳು ಕೂಡ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿವೆ. ಇದೀಗ ಯುವತಿಯ ಪೋಷಕರು ಮತ್ತೆ ಬೆಂಗಳೂರಿಗೆ ತೆರಳಿ ಮಗಳು ನಾಪತ್ತೆಯಾಗಿರುವ ದೂರು ದಾಖಲು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...