Friday, April 18, 2025
Friday, April 18, 2025

Red Cross Sanjeevini Blood Bank 55 ನೇ ಬಾರಿಗೆ ರಕ್ತದಾನ ಮಾಡಿದ ಅಲ್ಲಾಬಕಾಸ್

Date:

Red Cross Sanjeevini Blood Bank ಜೀವನ ಸಾರ್ಥಕವಾಗಬೇಕಾದರೆ ನಮ್ಮ ಕೈಲಾದಷ್ಟು ಸೇವಾ ಕಾರ್ಯಗಳನ್ನು ನಡೆಸಬೇಕು ಎಂದು ಲ್ಯಾಬ್ ಟೆಕ್ನಿಷಿಯನ್ ಅಲ್ಲಾಬಕಾಸ್ ಹೇಳಿದರು.
ಸಂಜೀವಿನಿ ರೆಡ್‌ಕ್ರಾಸ್ ರಕ್ತನಿಧಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಲ್ಲಾಬಕಾಸ್ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ 55ನೇ ಬಾರಿ ರಕ್ತದಾನ ಮಾಡಿದ ಅವರು ಮಾತನಾಡಿ, ನನ್ನಿಂದ ರಕ್ತದಾನ ಮಾಡಲು ಶಕ್ತಿ ಇರುವವರೆಗೂ ರಕ್ತದಾನ ಮಾಡುತ್ತೇನೆ. ಇದರಿಂದ ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವವರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
Red Cross Sanjeevini Blood Bank ಇದೇ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಾನು ಈವರೆಗೂ 47 ಬಾರಿ ರಕ್ತದಾನ ಮಾಡಿದ್ದು, ಎಲ್ಲ ದಾನಗಳಿಗಿಂತಲೂ ರಕ್ತದಾನ ತುಂಬಾ ಶ್ರೇಷ್ಠ. ರಕ್ತದ ಮಹತ್ವವನ್ನು ಅರಿತುಕೊಂಡು ಆರೋಗ್ಯವಂತ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಇದರಿಂದ ನಮಗೂ ಅನೇಕ ಉಪಯೋಗಗಳಿವೆ ಎಂದರು.
ಪ್ರಸ್ತುತ ಬೇಡಿಕೆಗೆ ಅನುಗುಣವಾಗಿ ರಕ್ತ ಲಭ್ಯವಾಗುತ್ತಿಲ್ಲ. ರಕ್ತದ ಕೊರತೆ ಎದುರಾಗುವುದನ್ನು ಕಾಣುತ್ತೇವೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಡಾ. ದಿನಕರ್ ಮಾತನಾಡಿ, ರಕ್ತದಾನ ಆರೋಗ್ಯ ಕಾಪಾಡುವುದರ ಜತೆಗೆ ನಮ್ಮ ದೇಹದಲ್ಲಿರುವ ಕೊಬ್ಬಿನಾಂಶ ಕಡಿಮೆ ಮಾಡುತ್ತದೆ. ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ. ಉತ್ತಮ ಜೀವನಶೈಲಿ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ಅಲ್ಲಾಬಕಾಸ್ ಪತ್ನಿ ಕೂಡ ಇದೇ ಸಂದರ್ಭದಲ್ಲಿ ರಕ್ತದಾನ ಮಾಡಿದರು. ದಂಪತಿಯನ್ನು ಅಭಿನಂದಿಸಲಾಯಿತು. ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯಕುಮಾರ್, ರಕ್ತನಿಧಿಯ ಪೂಜಾ, ಡಾ. ದಿನಕರ್, ಸುಲ್ತಾನ್, ಧರಣೇಂದ್ರ ದಿನಕರ್, ಉಮೈಸಲ್ಮಾ, ಕವಿತಾ, ಶಿಲ್ಪಾ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...